Advertisement
ಪುತ್ರ ಶ್ರೀರಂಗ ಅವರು ಕುಟುಂಬಸ್ಥರು ಮತ್ತು ಆಪ್ತರ ಉಪಸ್ಥಿತಿಯಲ್ಲಿ ಅಂತಿಮ ವಿಧಿ ವಿಧಾನಗಳನ್ನು ಪೂರೈಸಿದರು.
Related Articles
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರಾದ ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಷಿ ಸಹಿತ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
Advertisement
ಸುಬ್ಬಣ್ಣ ಹೆಸರಿನಲ್ಲಿ ಶಾಶ್ವತ ಯೋಜನೆಶಿವಮೊಗ್ಗ ಸುಬ್ಬಣ್ಣ ಅವರು ನಾಡಿನ ಯುವಶಕ್ತಿಗೆ ಪ್ರೇರಣೆ ಆಗಿದ್ದರು. ಅವರ ಹೆಸರು ಸದಾ ನೆನಪಿನಲ್ಲಿ ಉಳಿಯುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಿವಮೊಗ್ಗ ಸುಬ್ಬಣ್ಣ ಅವರ ಹೆಸರಿನಲ್ಲಿ ಸ್ಮಾರಕ, ಪ್ರತಿಷ್ಠಾನ, ಪ್ರಶಸ್ತಿ ಮುಂತಾದವುಗಳ ಬಗ್ಗೆ ಚಿಂತನೆಯಿದ್ದು, ಈ ಕುರಿತು ಕುಟುಂಬಸ್ಥರ ಅಭಿಪ್ರಾಯ ಪಡೆಯುತ್ತೇವೆ. ಸುಬ್ಬಣ್ಣ ಮತ್ತು ನನ್ನ ಜತೆ ಪ್ರೀತಿಯ ಸಂಬಂಧ ಇತ್ತು. ಅವರ ನಿಧನ ಕರ್ನಾಟಕದ ಕಲಾ ಜಗತ್ತಿಗೆ ತುಂಬಲಾಗದ ನಷ್ಟ ಎಂದು ಸಿಎಂ ಹೇಳಿದರು.