ಮುಂಬಯಿ: ಕನ್ನಡ ವೆಲ್ಫೇರ್ ಸೊಸೈಟಿ ಘಾಟ್‌ಕೋಪರ್ ವತಿಯಿಂದ ಸಂಸ್ಥೆಯ ಮಹೇಶ್ ಶೆಟ್ಟಿ ಬಾಬಾಸ್ ಗ್ರೂಪ್ ಆಡಿಟೋರಿಯಂನಲ್ಲಿ ಪರಿಸರದ ತುಳು-ಕನ್ನಡಿಗರ ಮಕ್ಕಳಿಗಾಗಿ ಚಿಣ್ಣರ ಚಿತ್ರಕಲಾ ಸ್ಪರ್ಧೆಯನ್ನು ಮಾ. 3 ರಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕೋಟಕ್ ಮಹೀಂದ್ರಾ ಲೈಫ್ ಇನ್ಶೂರೆನ್ಸ್ ಶಾಖಾಧಿಕಾರಿ ಭಾಸ್ಕರ ಸಾಲ್ಯಾನ್ ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ, ಪರಿಸರದ ತುಳು-ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿರುವ ಕನ್ನಡ ವೆಲ್ಫೆàರ್ ಸೊಸೈಟಿ ಪರಿಸರದ ಚಿಣ್ಣರ ಸುಪ್ತ ಪ್ರತಿಭೆಗಳನ್ನು ಗುರುತಿಸಲು ಮತ್ತು ಅವರಿಗೆ ಪ್ರೋತ್ಸಾಹ ನೀಡಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸ್ತುತ್ಯರ್ಹ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಮ್ಮೆಯಾಗುತ್ತಿದೆ. ಈ ಕಾರ್ಯಕ್ರಮವನ್ನು ಕೋಟಕ್ ಮಹೀಂದ್ರಾ ಲೈಫ್ ಇನ್ಶೂರೆನ್ಸ್Õನ
ಸಹಯೋಗದೊಂದಿಗೆ ಆಯೋ ಜಿಸಿರುವುದಕ್ಕೆ ಸಂಸ್ಥೆಗೆ ಕೃತಜ್ಞನಾಗಿದ್ದೇನೆ ಎಂದು ನುಡಿದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ವೆಲ್ಫೇರ್ ಸೊಸೈಟಿಯ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ ಅವರು, ಸಂಸ್ಥೆಯು ಪರಿಸರದ ತುಳು-ಕನ್ನಡಿಗರ ಮಕ್ಕಳ ಪ್ರತಿಭೆಗೆ ಸದಾ ಪ್ರೋತ್ಸಾಹ ನೀಡುತ್ತಿದೆ. ನಮ್ಮ ಸದಸ್ಯರು, ಪಾಲಕರು, ಪೋಷಕರು, ಮಕ್ಕಳಿಗೆ ಯೋಗ್ಯ ರೀತಿಯಲ್ಲಿ ಸಂಸ್ಕೃತಿ, ಸಂಸ್ಕಾರಗಳನ್ನು ಕಲಿಸಿ, ಮುಂದಿನ ಯುವ ಪೀಳಿಗೆಗೆ ಭದ್ರ ಬುನಾದಿಯನ್ನು ಹಾಕಬೇಕು. ಮಕ್ಕಳನ್ನು ನಾಳಿನ ಯೋಗ್ಯ ನಾಗರಿಕರನ್ನಾಗಿ ಬೆಳೆಸುವ ಕರ್ತವ್ಯ ಪೋಷಕರದ್ದಾಗಿದೆ. ಕನ್ನಡ ವೆಲ್ಫೆàರ್ ಸೊಸೈಟಿಯ ಮಕ್ಕಳ ಪ್ರತಿಭೆಗಳಿಗೆ ಸದಾ ಸ್ಪಂದಿಸುತ್ತದೆ ಎಂದರು.
ವೇದಿಕೆಯಲ್ಲಿ ಸೊಸೈಟಿಯ ಕಾರ್ಯದರ್ಶಿ ಸುಧಾಕರ ಎಲ್ಲೂರು, ಕೋಶಾಧಿಕಾರಿ ಹರೀಶ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ಎನ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ಪ್ರಿಯಾ ಎನ್. ಶೆಟ್ಟಿ ಉಪಸ್ಥಿತರಿದ್ದರು. ಕೋಟಕ್ ಮಹೀಂದ್ರ ಲೈಫ್ ಇನ್‌ಸ್ಯೂರೆನ್ಸ್‌ನ ಅಮಿತಾ ಶೆಟ್ಟಿ ಅವರು ಚಿತ್ರಕಲಾ ಸ್ಪರ್ಧೆಯನ್ನು ನಡೆಸಿಕೊಟ್ಟರು. ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿ ಶುಭಹಾರೈಸಿದರು.
ಕವಿ, ಲೇಕಖ ನಂದಳಿಕೆ ನಾರಾಯಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ವೆಲ್ಫೆàರ್ ಸೊಸೈಟಿಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ರಮಾನಂದ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಪ್ರಮೀಳಾ ಶೆಟ್ಟಿ, ಡಾ| ಪಲ್ಲವಿ ಶೆಟ್ಟಿ, ಹಿರಿಯಣ್ಣ ಶೆಟ್ಟಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯ-ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.