ಮುಂಬಯಿ: ಕನ್ನಡ ವೆಲ್ಫೇರ್ ಸೊಸೈಟಿ ಘಾಟ್‌ಕೋಪರ್ ಇದರ ಸುವರ್ಣ ಮಹೋತ್ಸವದ ಸರಣಿ ಕಾರ್ಯಕ್ರಮದ ಅಂಗವಾಗಿ ಜೂ. 25 ರಂದು ಅಪರಾಹ್ನ 3.30 ರಿಂದ ಘಾಟ್‌ಕೋಪರ್ ಪೂರ್ವದ ಪಂತ್‌ನಗರದ ಸುನಿಲ್ ಹೊಟೇಲ್ ಸಮೀಪದಲ್ಲಿರುವ ಸಂಸ್ಥೆಯ ಕನ್ನಡ ವೆಲ್ಫೆàರ್ ಸೊಸೈಟಿ ಸಭಾಗೃಹದಲ್ಲಿ ಚಿತ್ರಕಲಾ ಸ್ಪರ್ಧೆ, ಶ್ರೀ ಶನಿಮಹಾಪೂಜೆ ಹಾಗೂ ಶ್ರೀ ಶನೀಶ್ವರ ಮಹಾತೆ¾ ತಾಳಮದ್ದಳೆಯನ್ನು ಆಯೋಜಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಪೂರ್ವಾಹ್ನ 10 ರಿಂದ ಕನ್ನಡ ವೆಲ್ಫೆàರ್ ಸೊಸೈಟಿಯ ಮಹಿಳಾ ವಿಭಾಗದಿಂದ ಪರಿಸರದ ತುಳು-ಕನ್ನಡಿಗರ ಪ್ರತಿಭಾವಂತ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಿತು. ಅತಿಥಿಗಳಾಗಿ ಪಾಲ್ಗೊಂಡ ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ, ಉದ್ಯಮಿ, ಥಾಣೆ ಬಂಟ್ಸ್ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸುಲೋಚನಾ ಶೆಟ್ಟಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ವೆಲ್ಫೆàರ್ ಸೊಸೈಟಿ ಘಾಟ್‌ಕೋಪರ್ ಇದರ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ ಅವರು ವಹಿಸಿದ್ದರು. ಕನ್ನಡ ವೆಲ್ಫೆàರ್ ಸೊಸೈಟಿ ಘಾಟ್ಕೊàಪರ್ ಇದರ ಗೌರವಾಧ್ಯಕ್ಷ ವಿದ್ಯಾನಂದ ಬಿ. ರೈ, ಉಪಾಧ್ಯಕ್ಷ ಜಯರಾಜ ಜೈನ್, ಗೌರವ ಪ್ರಧಾನ ಕಾರ್ಯದರ್ಶಿ ಸುಧಾಕರ ಎಲ್ಲೂರು, ಕೋಶಾಧಿಕಾರಿ ರಘುನಾಥ್ ಎನ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಶಾ ಜಿ. ಶೆಟ್ಟಿ, ಗೌರವ ಕೋಶಾಧಿಕಾರಿ ವಿದ್ಯಾ ಎಂ., ಮಹಿಳಾ ವಿಭಾಗದ ಜಯಂತಿ ಆರ್. ಮೊಲಿ, ಸಂಸ್ಥೆಯ ನಂದಳಿಕೆ ನಾರಾಯಣ ಶೆಟ್ಟಿ, ಶಾಂತಾ ಎನ್. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.
ಅಪರಾಹ್ನ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ಸಹಕಾರದೊಂದಿಗೆ ಶ್ರೀ ಶನೀಶ್ವರ ಪೂಜಾ ಸಮಿತಿ ಪಕ್ಷಿಕೆರೆ ಬಳಗದ ಕಲಾವಿದರುಗಳಿಂದ ಶ್ರೀ ಶನೀಶ್ವರ ಪೂಜಾ ಸಹಿತ ಯಕ್ಷಗಾನ ತಾಳಮದ್ದಳೆ ನಡೆಯಿತು. ಶ್ರೀ ಶನೀಶ್ವರ ಮಹಾತೆ¾ ತಾಳಮದ್ದಳೆಯಲ್ಲಿ ಭಾಗವತರಾಗಿ ಸತೀಶ್ ಶೆಟ್ಟಿ ಬೊಂದೆಲ್, ಮದ್ದಳೆಯಲ್ಲಿ ಪದ್ಮನಾಭ ಶೆಟ್ಟಿಗಾರ್, ಚೆಂಡೆಯಲ್ಲಿ ದಯಾನಂದ ಶೆಟ್ಟಿಗಾರ್ ಅವರು ಪಾಲ್ಗೊಂಡಿದ್ದರು. ಅರ್ಥದಾರಿಗಳಾಗಿ ಕದ್ರಿ ನವನೀತ ಶೆಟ್ಟಿ, ದಿನೇಶ್ ಶೆಟ್ಟಿ ಕಾವಳಕಟ್ಟೆ, ಅಶೋಕ್ ಶೆಟ್ಟಿ ಸರಪಾಡಿ, ಸೀತಾರಾಮ ಕುಮಾರ್, ವಿಜಯಕುಮಾರ್ ಶೆಟ್ಟಿ ಮೈಲೊಟ್ಟು, ಪ್ರಸನ್ನ ಶೆಟ್ಟಿ ಅತ್ತೂರು ಅವರು ಭಾಗವಹಿಸಿದ್ದರು.
ಚಿತ್ರ-ವರದಿ: ಸುಭಾಷ್ ಶಿರಿಯಾ