Advertisement
ಆ. 22 ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ದಶಮಾ ನೋತ್ಸವ ಸಂಭ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಪ್ರಾಂತೀಯ ಭಾಷೆಗಳ ಮೇಲೆ ಪಾಶ್ಚಾಮಾತ್ಯ ಭಾಷೆಗಳ ಸವಾರಿ ಮಹತ್ತರ ಪ್ರಭಾವ ಬೀರುತ್ತಿದೆ. ಸ್ಥಳೀಯ ಭಾಷೆಗಳು ಉಳಿದರೆ ಮಾತ್ರ ನಮ್ಮ ಸಂಸ್ಕೃತಿ, ಸಂಸ್ಕಾರ, ಚದಾಚಾರಗಳು ಉಳಿದೀತು. ಇದನ್ನು ಸಂರಕ್ಷಿಸುವಲ್ಲಿ ವಿವಿಧ ಭಾಷೆಗಳ ಪತ್ರಕರ್ತರು ಸಂಘಟನೆಯ ಮೂಲಕ ಮುಂದಾಗಬೇಕು ಎಂದರು.
Related Articles
Advertisement
ಅತಿಥಿಗಳಾಗಿ ಪಾಲ್ಗೊಂಡ ಆರ್ಥಿಕ ತಜ್ಞ ಡಾ| ಆರ್.ಕೆ. ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಮುಖ್ಯ ಸಲಹೆಗಾರ ಸಿಎ ಐ. ಆರ್. ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಮಾತೃಭೂಮಿ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ, ಬಂಟರ ಸಂಘ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಅವರು ಮಾತನಾಡಿ ಶುಭಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅವರು ಮಾತನಾಡಿ, ಮುಂಬಯಿ ದಾನಿಗಳ ಅಭೂತಪೂರ್ವ ಸಹಕಾರದಿಂದ ಮುಂಬಯಿ ಪತ್ರಕರ್ತರ ಸಂಘ ಯಶಸ್ವಿಯಾಗಿ ದಶಮಾನೋತ್ಸವ ಆಚರಿಸುತ್ತಿದೆ. ದುಬಾರಿ ವೈದ್ಯಕೀಯ ವೆಚ್ಚಗಳಿಗೆ ಸಹಾಯ, ಅನ್ಯಾಯವಾದಾಗ ಪ್ರತಿಭಟನೆಯ ಮೂಲಕ ನ್ಯಾಯ ಒದಗಿಸಿದ ಆತ್ಮತೃಪ್ತಿ ನಮಗಿದೆ. ಸಂಸದ ಗೋಪಾಲ್ ಶೆಟ್ಟಿ ಅವರ ಆಶ್ವಾಸನೆಯಂತೆ ಪತ್ರಕರ್ತರ ವಸತಿ ಸೌಲಭ್ಯ ಶೀಘ್ರ ನೆರವೆರುವ ಭರವಸೆಯಿದೆ ಎಂದರು.
ಸಮಾರಂಭದಲ್ಲಿ ಹಿರಿಯ ಸಾಧಕರನ್ನು ಸಮ್ಮಾನಿಸಲಾಯಿತು. ಪ್ರಾರಂಭದಲ್ಲಿ ಪುತ್ತೂರಿನ ಪತ್ರಕರ್ತ ಡಾ| ಶಿವಾನಂದ ಅವರಿಂದ ವಿಚಾರ ಮಂಡನೆ ನಡೆಯಿತು. ಗೌರವ ಕಾರ್ಯದರ್ಶಿ ರೋನ್ಸ್ ಬಂಟ್ವಾಳ್ ಸಂಸ್ಥೆಯ ಸಿದ್ಧಿ- ಸಾಧನೆ ಗಳನ್ನು ವಿವರಿಸಿದರು. ಕಲಾಸೌರಭದ ಪದ್ಮನಾಭ ಸಸಿಹಿತ್ಲು ಪ್ರಾರ್ಥನೆಗೈದರು. ಗೌರವ ಕೋಶಾಧಿಕಾರಿ ಪ್ರೇಮನಾಥ್ ಶೆಟ್ಟಿ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಶೋಕ ಪಕ್ಕಳ, ವಿಚಾರ ಮಂಡನೆಯನ್ನು ದಯಾಸಾಗರ್ ಚೌಟ, ಸಭಾ ಕಾರ್ಯಕ್ರಮವನ್ನು ಹರೀಶ್ ಹೆಜ್ಮಾಡಿ ನಿರೂಪಿಸಿದರು. ವೇದಿಕೆಯಲ್ಲಿ ಉದ್ಯಮಿ ರಘುರಾಮ ಶೆಟ್ಟಿ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಜಯಾ ಪೂಜಾರಿ, ಆಹ್ವಾನಿತ ಸದಸ್ಯ ಸುರೇಶ್ ಶೆಟ್ಟಿ ಯೆಯ್ನಾಡಿ, ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಡಾ| ಶಿವ ಮೂಡಿಗೆರೆ ಮತ್ತಿರರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನಿರ್ದೇಶನದಲ್ಲಿ ಪತ್ರಕರ್ತರಿಂದ ಮಹಿಷಾಸುರ ಮರ್ದಿನಿ ಯಕ್ಷಗಾನ ಪ್ರದರ್ಶನಗೊಂಡಿತು. ಗುರಿ ಹಾಗೂ ನಿಯಮದೊಂದಿಗೆ ದುಡಿಯುವ ಪತ್ರಕರ್ತರಿಗೆ ಎಲ್ಲರನ್ನು ಖುಷಿ ಪಡಿಸಲು ಸಾಧ್ಯವಿಲ್ಲ. ನಿಷ್ಪಕ್ಷಪಾತ ಮತ್ತು ವಸ್ತುನಿಷ್ಠ ಸುದ್ದಿಗಳಿಂದ ಸಮಾಜ ಶುದ್ಧೀಕರಣವಾಗುತ್ತದೆ.
– ಕೆ. ಎಂ. ಶೆಟ್ಟಿ, ಕಾರ್ಯಾಧ್ಯಕ್ಷರು, ವಿ. ಕೆ. ಸಮೂಹ ಮುಂಬಯಿ ಕನ್ನಡ ಭಾಷೆ, ಸಂಸ್ಕೃತಿ ವಿವಿಧ ಕಲಾಪ್ರಕಾರಗಳನ್ನು ಮುಂಬಯಿ ಪತ್ರಕರ್ತರು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಇವರ ಜನ ಸೇವೆಗೆ ಬಂಟರ ಸಂಘದ ಪೂರ್ಣ ಸಹಕಾರ ಇದೆ.
– ಚಂದ್ರಹಾಸ ಶೆಟ್ಟಿ,
ಉಪಾಧ್ಯಕ್ಷರು, ಬಂಟರ ಸಂಘ ಮುಂಬಯಿ ರಕ್ತಪಾತವಿಲ್ಲದೆ ಹರಿತವಾದ ಲೇಖನಿಯ ಮೂಲಕ ಸರಕಾರವನ್ನು ಎಚ್ಚರಿಸುವ ಪತ್ರಕರ್ತರು ಸಮಾಜಮುಖೀ ಚಿಂತಕರು.
-ಕಡಂದಲೆ ಸುರೇಶ್ ಭಂಡಾರಿ, ಸ್ಥಾಪಕಾಧ್ಯಕ್ಷರು, ಭಂಡಾರಿ ಮಹಾಮಂಡಲ ಹೊಟೇಲ್ ಉದ್ಯಮ, ರಾತ್ರಿಶಾಲೆಗಳು, ಕನ್ನಡ ಪತ್ರಿಕೋದ್ಯಮ ಮತ್ತು ಕನ್ನಡ ಸಂಸ್ಥೆಗಳು ಶತಮಾನಗಳಿಂದಲೂ ಕನ್ನಡ ಭಾಷೆ, ಸಂಸ್ಕೃತಿಯ ಉಳಿವಿಕೆಗಾಗಿ ಮಹತ್ತರ ಯೋಗದಾನ ನೀಡಿದೆ.
– ಡಾ| ಜಿ. ಎನ್. ಉಪಾಧ್ಯ,
ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿವಿ