Advertisement
ನಡೆದಿದ್ದೇನು?
Related Articles
Advertisement
ಭಕ್ತಾದಿಗಳಿಗೆ ರಕ್ಷಣೆ ಒದಗಿಸುವಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರಿಗೆ ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ. ಬೇರೆ ರಾಜ್ಯಗಳಿಂದ ಜಾತ್ರೆಗಳಿಗೆ ಭೇಟಿ ನೀಡಿವವರು ಹೆಚ್ಚಿರುತ್ತಾರೆ. ಅಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹೊರಗಿನಿಂದ ಬರುವ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶದಿಂದಲೂ ದೊಡ್ಡ ಪ್ರಮಾಣದಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಾರೆ. ಹಿಂದಿರುಗುವ ಸಂದರ್ಭದಲ್ಲಿ ಕೆಲವು ಭಕ್ತರ ನಡುವೆ ಜಗಳ ಉಂಟಾಗಿ ಇರಿತವೂ ನಡೆದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಹೊರಗಿನಿಂದ ಬಂದಿದ್ದ ಭಕ್ತರ ನಡುವೆ ಜಗಳ ಉಂಟಾಗಿದೆ. ಆಂಧ್ರಪ್ರದೇಶದ ಅಧಿಕಾರಿಗಳೊಂದಿಗೆ ರಾತ್ರಿಯಿಂದಲೇ ಸಂಪರ್ಕ ದಲ್ಲಿದ್ದೇನೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಇಬ್ಬರಿಗೆ ತೀವ್ರವಾಗಿ ಗಾಯವಾಗಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳೊಂದಿಗೆ ಮಾತನಾಡಲು ಪ್ರಯತ್ನ ನಡೆದಿದೆ ಎಂದರು.
ಕರ್ನೂಲ್ ಎಸ್ ಪಿ ಜತೆ ಮಾತನಾಡಿದ ನಿರಾಣಿ
ಶ್ರೀ ಶೈಲ ದಲ್ಲಿ ಇರಿತಕ್ಕೊಳಗಾದ ಯುವಕ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಜಾನಮಟ್ಟಿಯಾವನಾಗಿದ್ದು, ಆ ಹಿನ್ನೆಲೆಯಲ್ಲಿ ಕರ್ನೂಲ್ ಎಸ್ ಪಿ ಸುಧೀರ್ ಕುಮಾರ ರೆಡ್ಡಿ ಜತೆ ಸಚಿವ ಮುರುಗೇಶ್ ನಿರಾಣಿ ಮಾತಾಡಿದ್ದಾರೆ.
ಭಕ್ತಾದಿಗಳು ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ ಪಾದಯಾತ್ರೆ ಮಾಡುತ್ತಾರೆ. ಆದರೆ ಈ ಬಾರಿ ಭಕ್ತಾದಿಗಳ ಮೇಲೆ ಆದ ಹಲ್ಲೆ, ಗಲಾಟೆ ಬಗ್ಗೆ ಬಹಳ ನೋವಾಗಿದೆ ಎಂದು ನಿರಾಣಿ ತಿಳಿಸಿದ್ದಾರೆ.
“ನನ್ನ ಮತ ಕ್ಷೇತ್ರ ಬೀಳಗಿಯ ಯುವಕ ಶ್ರೀಶೈಲ್ ವಾರಿಮಠ ಅವರಿಗೆ ಚಾಕು ಇರಿತ ಬಹಳ ನೋವು ತಂದಿದೆ. ಈ ಹಿನ್ನೆಲೆ ಆಂಧ್ರ ಪ್ರದೇಶ ಕರ್ನೂಲ್ ಜಿಲ್ಲೆ ಎಸ್ ಪಿ ಸುಧೀರ್ ಕುಮಾರ ರೆಡ್ಡಿ ಜೊತೆ ಮಾತಾಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದೇನೆ. ಘಟನೆಯ ಸವಿವರ ಕೇಳಿದ್ದೇನೆ. ಗಾಯಗೊಂಡ ಬೀಳಗಿ ತಾಲೂಕಿನ ಜಾನಮಟ್ಟಿ ಗ್ರಾಮದ ಶ್ರೀಶೈಲ ವಾರಿಮಠ, ಮತ್ತಿತರ ಚಿಕಿತ್ಸೆಗೆ ಅಲ್ಲಿ ಆಸ್ಪತ್ರೆ, ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ.ಕನ್ನಡಿಗರ ಮೇಲೆ ಹಲ್ಲೆ ವಾಹನ ಜಖಂಗೊಳಿಸಿದ್ದು ಖಂಡನೀಯ, ಕನ್ನಡಿಗರು ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು ಶಾಂತಿಯಿಂದ ಇರಿ. ಸರಕಾರ ಪರಿಸ್ಥಿತಿ ನಿರ್ವಹಿಸಲು ಕ್ರಮ ಕೈಗೊಳ್ಳುತ್ತಿದೆ” ಎಂದು ನಿರಾಣಿ ತಿಳಿಸಿದ್ದಾರೆ.