Advertisement

ಕನ್ನಡಿಗರಿಗೆ ಬಗೆದ ದ್ರೋಹ: ಸಿದ್ದು ಟ್ವೀಟ್‌

11:17 PM Sep 13, 2019 | Lakshmi GovindaRaju |

ಬೆಂಗಳೂರು: ಬ್ಯಾಂಕಿಂಗ್‌ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೇ ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನ ಕೆಣುಕುತ್ತಿದೆ. ನಾಡು ನುಡಿ ಬಗೆಗೆ ಮಲತಾಯಿ ಧೋರಣೆಯಿಂದ ನಡೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿ-ದ್ದಾರೆ. ಹಿಂದಿ ಹೇರಿಕೆ, ನಾಡ ಧ್ವಜಕ್ಕೆ ಅಡ್ಡಗಾಲು, ನೆರೆ ಪರಿಹಾರದಲ್ಲಿ ನಿರ್ಲಕ್ಷ್ಯ. ಕರ್ನಾಟಕದ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ.

Advertisement

ಕನ್ನಡಿಗರ ಔದಾರ್ಯ ಮತ್ತು ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. ರಾಜ್ಯದಿಂದ 25 ಜನ ಬಿಜೆಪಿ ಸಂಸದರು ಆಯ್ಕೆಯಾಗಿ ದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದೇ ಸರ್ಕಾರವಿದೆ. ಹೀಗಿದ್ದರೂ ಐಬಿಪಿಎಸ್‌ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡದಿರುವುದು ಕನ್ನಡಿಗರಿಗೆ ಬಗೆದ ದ್ರೋಹ. ಕನ್ನಡಿಗರು ಇದನ್ನು ಸಹಿಸರು ಎಂದು ಟ್ವೀಟ್‌ ಮೂಲಕ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next