Advertisement

ಕಾನ್ಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 17ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ

09:02 AM Jun 09, 2021 | Team Udayavani |

ಉತ್ತರಪ್ರದೇಶ: ಬಸ್ ಮತ್ತು ಜೆಸಿಬಿ ಲೋಡರ್‍ (ಟ್ರಕ್) ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 17 ಜನರು ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ಕಾನ್ಪುರದಲ್ಲಿ ನಡೆದಿದೆ. ಈ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನಿಧಿ ಘೋಷಿಸಿದ್ದಾರೆ.

Advertisement

ಕಾನ್ಪುರದ ಸಚೆಂಡಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು,. ಹಲವು ಮಂದಿ ಗಂಭಿರವಾಗಿ ಗಾಯಗೊಂಡಿದ್ದರು. ಉತ್ತರಪ್ರದೇಶದ ಶತಾಭ್ದಿ ಎಸಿ ಬಸ್  ಕಾನ್ಪುರದಿಂದ ಅಹಮದಾಬಾದ್ ಕಡೆ ವೇಗವಾಗಿ ಪ್ರಯಾಣಿಸುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಜೆಸಿಬಿ ಲೋಡರ್ ಗೆ  ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:  ಕಲಬುರಗಿ: ಜಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಮಹಿಳಾ ರೋಗಿ ಮೇಲೆ ಬಲಾತ್ಕಾರ ಯತ್ನ ಆರೋಪ

ಘಟನೆ ಕುರಿತು ಸಂತಾಪ ಸೂಚಿಸಿದ ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ, ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ ಆರ್ ಎಫ್) ಪರಿಹಾರ ಘೋಷಣೆ ಮಾಡಲಾಗಿದೆ.

Advertisement

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಕೂಡ ಘಟನೆ ಕುರಿತು ಸಂತಾಪ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:  ಶಿವಮೊಗ್ಗದಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ; ವ್ಯಾಪಕ ಜನಾಕ್ರೋಶ

Advertisement

Udayavani is now on Telegram. Click here to join our channel and stay updated with the latest news.

Next