ಕಾನ್ಪುರ(ಉತ್ತರ ಪ್ರದೇಶ) : ಘಟಂಪುರದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 26 ಯಾತ್ರಾರ್ಥಿಗಳು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಉನ್ನಾವೊದಲ್ಲಿ ಚಂದ್ರಿಕಾ ದೇವಿ ದರ್ಶನ ಪಡೆದು ಭಕ್ತರು ವಾಪಸ್ ತಮ್ಮ ಸ್ವಗ್ರಾಮ ಕೊರ್ತಾಗೆ ವಾಪಸ್ಸಾಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದಿದೆ ಪರಿಣಾಮ 26 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ತೆರಳಿ ಸ್ಥಳೀಯರ ನೆರವಿನಿಂದ ಗಾಯಾಳುಗಳ ರಕ್ಷಣೆ ನಡೆಸಿದ್ದಾರೆ, ಗಾಯಾಳುಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಹೋಗುವಾಗ ದುರಂತ ಸಂಭವಿಸಿದೆ.
ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿ ಸುಮಾರು 50 ಜನರಿದ್ದರು ಎಂದು ಹೇಳಲಾಗುತ್ತಿದೆ. ದೇವಾಸ್ಥಾನದಲ್ಲಿ ಮಗುವಿನ ಜವಳ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದಕ್ಕಾಗಿ ಕುಟುಂಬಸ್ಥರು ಹಾಗೂ ಸಂಬಂಧಿಕರು ದೇವಸ್ಥಾನಕ್ಕೆ ಬಂದು ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಧಾನಿ ಸಂತಾಪ :
ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ತಲಾ 50,000 ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದಾರೆ.