ಬೆಂಗಳೂರು: ನಾಲ್ಕನೇ ವರ್ಷದ ಚಂದನವನ ಫಿಲಂ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಭಾನುವಾರ ನಡೆಯಿತು. 2022ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆ ನೀಡಲಾದ ಪ್ರಶಸ್ತಿಯಲ್ಲಿ ರಿಷಭ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ “ಕಾಂತಾರ’ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದ “ಕೆಜಿಎಫ್ 2′ ಚಿತ್ರಗಳು ಅತೀ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿವೆ.
ಅತ್ಯುತ್ತಮ ನಟ ಪ್ರಶಸ್ತಿಯನ್ನು ಕಾಂತಾರ ಸಿನಿಮಾದ ನಟನೆಗಾಗಿ ರಿಷಭ್ ಶೆಟ್ಟಿ ಪಾಲಾದರೆ, ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡಾ “ಕಾಂತರ’ದ ಕೈ ಸೇರಿದೆ. ಅತ್ಯುತ್ತಮ ಸಂಗೀತ “ಕಾಂತಾರ’ ಚಿತ್ರಕ್ಕಾಗಿ ಅಜನೀಶ್ ಲೋಕನಾಥ್ ಪಡೆದುಕೊಂಡರೆ, ಅತ್ಯುತ್ತಮ ಸ್ಟಂಟ್ ಪ್ರಶಸ್ತಿಯು “ಕಾಂತಾರ’ ಸಿನಿಮಾದ ವಿಕ್ರಮ್ ಮೋರ್ ಅವರಿಗೆ ಸಂದಿದೆ.
ಯಶ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್‌ನ ಚಿತ್ರಕ್ಕೆ ಒಟ್ಟು ಮೂರು ಪ್ರಶಸ್ತಿಗಳು ಸಂದಿದ್ದು, ಛಾಯಾಗ್ರಹಣಕ್ಕಾಗಿ ಭುವನ್ ಗೌಡ, ಅತ್ಯುತ್ತಮ ಸಂಕಲನಕ್ಕಾಗಿ ಪ್ರಜ್ವಲ್ ಕುಲಕರ್ಣಿ ಹಾಗೂ ಅತ್ಯುತ್ತಮ ವಿಎಫ್ಎಕ್ಸ್‌ಗಾಗಿ ರವಿ ಹೆಗಡೆ ಪಡೆದುಕೊಂಡಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ನಟಿಯರಾದ ರಮ್ಯಾ, ಕಾರುಣ್ಯ ರಾಮ…, ನಿರ್ದೇಶಕರಾದ ಬಿ.ಸುರೇಶ್, ರಾಜೇಂದ್ರ ಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇರ್ಖ, ಬಿ.ಎಸ್.ಲಿಂಗದೇವರು, ಕರ್ನಾ ಟಕ ಚಲ ನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.