Advertisement
ಈ ವಿಚಾರವಾಗಿಯೇ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸ್ಫಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ| ನಂಜಾವ ಧೂತ ಸ್ವಾಮೀಜಿ ಮತ್ತು ಚಂದ್ರಶೇಖರ ಸ್ವಾಮೀಜಿ ಸಮ್ಮುಖದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆದು ಕಾಂತರಾಜ ಆಯೋಗದ ವರದಿ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಈ ಸಭೆಯಲ್ಲಿ ಕಾಂತರಾಜ ಆಯೋಗದ ವರದಿಯ ಸಾಧಕ-ಬಾಧಕಗಳ ಬಗ್ಗೆ ದೊಡ್ಡಮಟ್ಟದ ಚರ್ಚೆ ನಡೆದು ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.
ರಾಜ್ಯ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರನ್ನು ಗುರುವಾರ ಭೇಟಿ ಮಾಡಿ ಸಮಾಲೋಚಿಸಿತು. ಕಾಂತರಾಜ ಆಯೋಗದ ವಿಚಾರವಾಗಿ ನ.2ರಂದು ಒಕ್ಕಲಿಗ ಸಂಘದಲ್ಲಿ ಹಮ್ಮಿಕೊಂಡಿರುವ ಸಭೆಯ ಸಾನಿಧ್ಯ ವಹಿಸುವಂತೆ ಮನವಿ ಮಾಡಿತು. ಶ್ರೀಗಳು ಸಭೆಯಲ್ಲಿ ಭಾಗವಹಿಸಲು ಸಮ್ಮತಿ ನೀಡಿದ್ದಾರೆ ಎಂದು ಹೋರಾಟ ಸಮಿತಿ ತಿಳಿಸಿದೆ. ಉಪ ಮುಖ್ಯಮಂತ್ರಿಗಳಿಗೆ ಆಹ್ವಾನ
ಈಗಾಗಲೇ ಒಕ್ಕಲಿಗ ಸಂಘ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಡಿ.ವಿ.ಸದಾನಂದ ಗೌಡ, ಮಾಜಿ ಸಚಿವರಾದ ಆರ್.ಅಶೋಕ್, ಅಶ್ವತ್ಥ ನಾರಾಯಣ, ಗೋಪಾಲಯ್ಯ ಸಹಿತ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿರುವ ಒಕ್ಕಲಿಗ ಶಾಸಕರಿಗೆ ಆಹ್ವಾನ ನೀಡಲಾಗಿದೆ.