ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮೂರನೇ ವರ್ಷದ ಚಾತುರ್ಮಾಸ್ಯ ವ್ರತಕ್ಕೆ ಜು.13 ರಂದು ವೈದಿಕ ವಿಧಿ ವಿಧಾನಗಳೊಂದಿಗೆ ಮೂಲ ಮಠ ಶ್ರೀ ಗುರುದೇವ ಮಠದಲ್ಲಿ ಆರಂಭಗೊಂಡಿತು.
ಬೆಳಗ್ಗೆ ಶ್ರೀ ರಾಮಕ್ಷೇತ್ರ ನಿತ್ಯಾನಂದ ಮಂದಿರದಲ್ಲಿ ಸ್ವಾಮೀಜಿಗಳು ವಿಶೇಷ ಪೂಜೆ ನೆರವೇರಿಸಿ ಬಳಿಕ ದೇವರ ಗುಡ್ಡೆ ದೇವಲಿಂಗೇಶ್ವರ ದೇವಸ್ಥಾನದಿಂದ ಸ್ವಾಮೀಜಿಯ ವೈಭವದ ಪುರ ಪ್ರವೇಶ ಮೆರವಣಿಗೆ ನೆರವೇರಿತು. ಬಳಿಕ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಸ್ವಾಮೀಜಿಗಳು ವ್ಯಾಸಪೀಠದಲ್ಲಿ ಪೀಠಾರೋಹಣ ನಡೆದು ಪಾದ ಪೂಜೆ ನಡೆಯಿತು.
ಕುದ್ರೋಳಿ ನಾರಾಯಣಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಪ್ರಾಸ್ತಾವಿಸಿ ಗುರುಪೂರ್ಣಿಮೆ ವಿಶೇಷತೆ ಕುರಿತು ಮಾತನಾಡಿದರು.
ಇದನ್ನೂ ಓದಿ:ಸ್ವದೇಶದಲ್ಲಿ ಖರ್ಜೂರ ಬೆಳೆದು ಸೈ ಎನಿಸಿಕೊಂಡ ರೈತ
ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಭಾಗಿಯಾದರು. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಹರೀಶ್ ಪೂಂಜ, ಚಾತುರ್ಮಾಸ್ಯ ಸಮಿತಿ ಪ್ರಧಾನ ಸಂಚಾಲಕ ಜಯಂತ ಕೋಟ್ಯಾನ್, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಭಟ್ಕಳ ಮಾಜಿ ಶಾಸಕ ಮಾಂಕಾಳು ವೈದ್ಯ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಗುರುದೇವ ಮಠದ ಟ್ರಸ್ಟಿಗಳಾದ ಚಿತ್ತರಂಜನ್ ಗರೋಡಿ, ತುಕಾರಾಮ ಸಾಲಿಯಾನ್, ಮಂಗಳೂರು ಮ.ನಾ.ಪ.ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಜಿ.ಪಂ.ಮಾಜಿ ಸದಸ್ಯ ತುಂಗಪ್ಪ ಬಂಗೇರ, ವಿಹಿಂಪ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್ ಧರ್ಮಸ್ಥಳ, ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.