Advertisement

“ಕಪಟ ನಾಟಕ’ಮುಕ್ತಾಯ

09:10 AM Jul 19, 2019 | Lakshmi GovindaRaj |

ಗರುಡ ಕ್ರಿಯೇಶನ್ಸ್‌ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಕಪಟ ನಾಟಕ’ ಪಾತ್ರಧಾರಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಸುತ್ತಮುತ್ತ ಚಿತ್ರಕ್ಕೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಆಡಿಯೋ ರಿಲೀಸ್‌ ಆಗಲಿದೆ.

Advertisement

ಕ್ರಿಶ್‌ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ಚಿತ್ರ. ಆದಿಲ್‌ ನದಾಫ್ ಅವರು ಚಿತ್ರಕ್ಕೆ ಸಂಗೀತ ನೀಡಿದ್ದು, ಕ್ರಿಶ್‌, ವೇಣು ಹಸ್ರಾಳಿ, ಚಾಣಕ್ಯ, ಅನಿರುದ್ಧ್ ಶಾಸ್ತ್ರಿ ಹಾಡುಗಳನ್ನು ರಚಿಸಿದ್ದಾರೆ.

ಹರಿಚರಣ್‌, ಸಿದ್ಧಾರ್ಥ್, ಮಾಧುರಿ ಶೇಷಾದ್ರಿ, ಇಶಾ ಸುಚಿ, ಪವನ್‌ ಪಾರ್ಥ ಹಾಗೂ ಅನಿರುದ್ಧ್ ಶಾಸ್ತ್ರಿ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಕಿರಣ್‌ ಚಂದ್ರ ಹಾಗೂ ವೇಣು ಹಸ್ರಾಳಿ ಸಂಭಾಷಣೆ ಬರೆದಿದ್ದಾರೆ. ಪರಮೇಶ್‌ ಛಾಯಾಗ್ರಹಣರುವ ಈ ಚಿತ್ರಕ್ಕೆ ಶ್ರೀಕಾಂತ್‌ ಅವರ ಸಂಕಲನದೆ.

ಸಂಗೀತ ಭಟ್‌, ಬಾಲು ನಾಗೇಂದ್ರ, ಕರಿಸುಬ್ಬು, ಶಂಕರ್‌ ನಾರಾಯಣ್‌, ಪ್ರಕಾಶ್‌ ತುಮ್ಮಿನಾಡು, ಉಗ್ರಂ ಮಂಜು, ಜಯದೇವ್‌, ಸುನೀಲ್‌ ಕುಲಕರ್ಣಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next