Advertisement
“ಬಿಜೆಪಿ ದೆಹಲಿ ಅಧ್ಯಕ್ಷ ವೀರೇಂದ್ರ ಸಚ್‌ದೇವ್ ಅವರ ಆದೇಶದ ಮೇರೆಗೆ, ಕಪಿಲ್ ಮಿಶ್ರಾ ಅವರನ್ನು ದೆಹಲಿ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ನೇಮಕಾತಿ ತಕ್ಷಣವೇ ಜಾರಿಗೆ ಬರಲಿದೆ ಎಂದು ಪಕ್ಷ ಹೇಳಿದೆ.
Related Articles
Advertisement
ಇದಲ್ಲದೆ, ಓಂ ಪ್ರಕಾಶ್ ಮಾಥುರ್ ಅವರನ್ನು ಬಿಜೆಪಿಯ ಛತ್ತೀಸ್‌ಗಢ ಚುನಾವಣಾ ಉಸ್ತುವಾರಿಯಾಗಿ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಸಹ-ಪ್ರಭಾರಿಯಾಗಿ ನೇಮಿಸಿದ್ದಾರೆ.
ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಮಧ್ಯಪ್ರದೇಶ ಚುನಾವಣಾ ಉಸ್ತುವಾರಿಯಾಗಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಹ-ಪ್ರಭಾರಿಗಳಾಗಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದ ಪ್ರಕಾಶ್ ಜಾವಡೇಕರ್ ಅವರನ್ನು ತೆಲಂಗಾಣ ಚುನಾವಣಾ ಉಸ್ತುವಾರಿಯಾಗಿ ಮತ್ತು ಸುನೀಲ್ ಬನ್ಸಾಲ್ ಅವರನ್ನು ಸಹ ಉಸ್ತುವಾರಿಯಾಗಿ ನೇಮಿಸಲಾಗಿದೆ.
ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಜ್ಜಾಗಿದೆ.