Advertisement

ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ದೂರು

06:00 AM Aug 14, 2018 | |

ಹೊಸದಿಲ್ಲಿ: ರಾಜ್ಯಸಭೆ ಚುನಾವಣೆಗೆ ಅಫಿಡವಿಟ್‌ ಸಲ್ಲಿಸುವಾಗ 25 ಕೋಟಿ ರೂ. ಮೌಲ್ಯದ ಸ್ವತ್ತು ವಿವರಗಳನ್ನು ನಮೂದಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಹಿರಿಯ ಕಾಂಗ್ರೆಸ್‌ ನಾಯಕರಾದ ಕಪಿಲ್‌ ಸಿಬಲ್‌, ಅಭಿಷೇಕ್‌ ಮನು ಸಿಂಘ್ವಿ ಸೇರಿದಂತೆ ಇತರರು ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್‌ರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಶಾ ಭೂಮಿಯನ್ನು ಅಡವಿಟ್ಟು 25 ಕೋಟಿ ರೂ. ಸಾಲ ಪಡೆದಿದ್ದಾರೆ. ಆದರೆ ಅದನ್ನು ಅಫಿಡವಿಟ್‌ನಲ್ಲಿ ತೋರಿಸಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ. ಆದರೆ ಇದು ಆಧಾರರಹಿತ ಆರೋಪ ಎಂದು ಬಿಜೆಪಿ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next