Advertisement
ಪಟ್ಟಣದ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ವಿದ್ಯಾರ್ಥಿಗಳ ಪ್ರತಿಭಟನಾ ರ್ಯಾಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕೆಂಬ ಘೋಷಣೆಗಳನ್ನು ಕೂಗುತ್ತಾ ಸಾಗಿ ತಹಶೀಲ್ದಾರ್ ಕಚೇರಿ ಬಳಿ ಸಮಾವೇಶಗೊಂಡ ನಂತರ ಎಫ್‌ಡಿಎ ಬಸವರಾಜಗೆ ಮನವಿ ಪತ್ರ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.
Related Articles

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ ಜಿಲ್ಲಾ ಕಾರ್ಯದರ್ಶಿ ಜಿ. ಸುರೇಶ್ ಮಾತನಾಡಿ, ಕಂಪ್ಲಿ ಪಟ್ಟಣದಲ್ಲಿ ಹಾಸ್ಟೆಲ್ಗಳ ವ್ಯವಸ್ಥೆ ಇಲ್ಲದೇ ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕಂಪ್ಲಿಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್, ಪ್ರಥಮ ದರ್ಜೆ ಕಾಲೇಜು, ಐಟಿಐ ಕಾಲೇಜುಗಳಲ್ಲಿ ಬೇರೆ ಬೇರೆ ಊರುಗಳ ಸಾಕಷ್ಟು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಪದವಿ ಪಾಲಿಟೆಕ್ನಿಕ್‌ನ ಬಿಸಿಎಂ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಒಂದು ಕೂಡ ಸರ್ಕಾರಿ ಹಾಸ್ಟೆಲ್ ಸೌಲಭ್ಯ ಇಲ್ಲದಿರುವುದು ವಿಪರ್ಯಾಸ. ಕಂಪ್ಲಿಯಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಒಂದು ಹಾಸ್ಟೆಲ್ ಮಾತ್ರ ಇದ್ದು, ಈ ಹಾಸ್ಟೇಲ್ಗೆ ಬರುವ ವಿದ್ಯಾರ್ಥಿಗಳಿಗೆ ಸೀಟುಗಳು ದೊರಕದಂತಾಗಿದೆ. ಅದ್ದರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೌಲಭ್ಯ ಅವಶ್ಯಕತೆ ಇದೆ. ಹೀಗಾಗಿ ಕಂಪ್ಲಿಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಸ್ಟೆಲ್ಗಳನ್ನು ಸ್ಥಾಪಿಸಬೇಕಾಗಿದೆ. ವಾರದೊಳಗೆ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೌಲಭ್ಯ ಸಿಗದಿದ್ದಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಜಂಟಿ ಕಾರ್ಯದರ್ಶಿ ರವಿಕಿರಣ್, ಕಾಲೇಜು ವಿದ್ಯಾರ್ಥಿಗಳಾದ ಮಾರೇಶ್, ಮಹೇಶ್, ಹೊನ್ನೂರಸ್ವಾಮಿ, ಅಶೋಕ್, ಜಯರಾಜ, ಪಂಪಾಪತಿ, ರಾಜು, ಮನೋಹರ, ಚಿರಂಜಿವಿ, ರವಿ, ವೆಂಕಟೇಶ್ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.