ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ವನ್ಯಜೀವಿ ಮಂಡಳಿ ಸಭೆ ನಡೆಯಲಿದೆ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದರು.
Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪತಗುಡ್ಡ ರಕ್ಷಣೆಗಾಗಿ ಹಗಲಿರುಳು ಧರಣಿ ಮಾಡಿರುವುದು ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪರಿಸರ ಪ್ರೇಮಿಗಳನ್ನು ಸಭೆಗೆ ಆಹ್ವಾನಿಸಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಅರಣ್ಯ ಸಚಿವರು, ಗದಗ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರೇತರ ಪ್ರತಿನಿಧಿಧಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳುವರು ಎಂದರು