Advertisement

ಕಪ್ಪತ್ತಗುಡ್ಡಕ್ಕೆ ಬೆಂಕಿ : ಅಪಾರ ಆಯುರ್ವೇದ ಸಸ್ಯಗಳು ನಾಶ

09:36 AM Mar 04, 2017 | |

ಗದಗ: ಜಿಲ್ಲೆಯ ಅಮೂಲ್ಯ ಖನಿಜ ಸಂಪತ್ತು, ವನ್ಯಜೀವಿಗಳು ಹಾಗೂ ಔಷಧೀಯ ಸಸ್ಯಗಳ ತಾಣವಾದ ಕಪ್ಪತ್ತಗುಡ್ಡದಲ್ಲಿ ಶುಕ್ರವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. 

Advertisement

ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದ್ದು, ಬೆಂಕಿಯ ಕೆನ್ನಾಲಗೆಗೆ ಅಪಾರ ಪ್ರಮಾಣದ ಆಯುರ್ವೇದ ಸಸ್ಯಗಳು ಸುಟ್ಟುಭಸ್ಮವಾಗಿದೆ. 

ಬೆಂಕಿ ಹತ್ತಿಕೊಂಡ ವಿಚಾರವನ್ನು ಗಮನಕ್ಕೆ ತಂದರೂ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ 3 ರಿಂದ 4 ಗಂಟೆಗಳು ಕಳೆದು ಸ್ಥಳಕ್ಕೆ ಬಂದಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. 

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. 

ಗುಡ್ಡದಲ್ಲಿ ಹೈಟೆನ್ಶನ್‌ ವಿದ್ಯುತ್‌ ತಂತಿಗಳು ಹಾದುಹೋಗಿದ್ದು ಅದರಿಂದಾಗಿ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಕೆಲವರು ಹೇಳಿದ್ದಾರೆ. 

Advertisement

17,872.24 ಹೆಕ್ಟೇರ್‌ ಪ್ರದೇಶದಲ್ಲಿ ಹರಡಿಕೊಂಡಿರುವ ಗುಡ್ಡದಲ್ಲಿ ಅಪರೂಪದ ಸಸ್ಯ ಸಂಪತ್ತು ಇದೆ. 

ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಮುಂದಾಗಿದ್ದು ಇದರ ವಿರುದ್ಧ ವಿವಿಧ ಸಂಘಟನೆಗಳು,ರಾಜಕೀಯ ಪಕ್ಷಗಳ ನೇತೃತ್ವದಲ್ಲಿ  ಭಾರೀ ಹೋರಾಟ ನಡೆಸಲಾಗುತ್ತಿದೆ. 

ಈ ಹಿಂದೆ ಹಲವು ಬಾರಿ ಕಿಡಿಗೇಡಿಗಳು ಗುಡ್ಡಕ್ಕೆ ಬೆಂಕಿ ಹಚ್ಚಿದ್ದು ಗಮನಕ್ಕೆ ಬಂದಿತ್ತು. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next