Advertisement

Kapu ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ; ಅಧ್ಯಕ್ಷರಾಗಿ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ

10:39 PM Jan 31, 2024 | Team Udayavani |

ಕಾಪು: ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ನಿ. ಪಣಿಯೂರು ನೂತನ ಅಧ್ಯಕ್ಷರಾಗಿ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಅವಿರೋಧ ಆಯ್ಕೆಯಾಗಿದ್ದಾರೆ.

Advertisement

ಬೆಳಪು ಗ್ರಾ.ಪಂ.ನ ಅಧ್ಯಕ್ಷರಾಗಿ ದಾಖಲೆಯ 10ನೇ ಬಾರಿಗೆ ಚುನಾಯಿತರಾಗಿರುವ ಅವರು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ, ಉಡುಪಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ನಿಯಮಿತ, ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾಗಿ, ದ.ಕ. ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ದೇವಿಪ್ರಸಾದ್‌ ಅವರು ಸತತ 2 ವರ್ಷಗಳಿಂದ ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಿರಂತರ ದಿನವಹಿ 100 ಲೀಟರ್‌ ಹಾಲು ಪೂರೈಸುವ ಮೂಲಕ ಸಂಘಕ್ಕೆ ಅತೀ ಹೆಚ್ಚು ಹಾಲು ಪೂರೈಸಿದ ಸಾಧಕರೆಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next