Advertisement

Kapu: ಬೈಕ್‌ -ಕಾರು ಮುಖಾಮುಖಿ ಢಿಕ್ಕಿ; ಬೈಕ್‌ ಸವಾರ ಮೃತ್ಯು

05:50 PM Jul 20, 2024 | Team Udayavani |

ಕಾಪು:  ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಶನಿವಾರ (ಜು.20) ಕೊಪ್ಪಲಂಗಡಿಯಲ್ಲಿ ನಡೆದಿದೆ.

Advertisement

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವಾಗ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್‌ -ಕಾರು ಪರಸ್ಪರ  ಮುಖಾಮುಖಿ ಢಿಕ್ಕಿಯಾದ ಪರಿಣಾಮ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ.


ಮೃತಪಟ್ಟ ಬೈಕ್‌ ಸವಾರ ತಮಿಳುನಾಡು ಮೂಲದ ಯುವಕನಾಗಿದ್ದು,  ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಅಪಘಾತದ ಹೊಡೆತಕ್ಕೆ ಸ್ಥಳದಲ್ಲಿದ್ದ  ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಸ್ಥಳಕ್ಕೆ ಕಾಪು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next