Advertisement

ಕಾಪು: ದೀಪಾವಳಿ ಆಚರಣೆ, ಗೂಡು ದೀಪ ಸ್ಪರ್ಧೆ

07:26 PM Nov 03, 2021 | Team Udayavani |

ಕಾಪು : ದೀಪಾವಳಿ ಹಬ್ಬಕ್ಕೆ ಗೂಡು ದೀಪಗಳು ವಿಶೇಷ ಮೆರುಗು ತರುತ್ತವೆ. ಹಿಂದಿನ ಕಾಲದಲ್ಲಿ ಎಲ್ಲ್ಲರೂ ಸೇರಿ ಸಹಕಾರ ಪದ್ಧತಿಯಲ್ಲಿ ಸಾಂಪ್ರದಾಯಿಕ ಶೈಲಿಯ ಗೂಡುದೀಪಗಳನ್ನು ರಚಿಸುತಿದ್ದರು. ಆದರೆ ಈಗ ಆಧುನಿಕ ಶೈಲಿಗೆ ಹೊಂದಿಕೊಳ್ಳುವಂತಹ ನವನವೀನ ಮಾದರಿಯ ಗೂಡುದೀಪಗಳು ಮಾರುಕಟ್ಟೆಯಲ್ಲಿ ದೊರಕುತ್ತಿವೆ. ನಮ್ಮ ಸಾಂಪ್ರದಾಯಿಕ ಸಂಸ್ಕೃತಿಗಳನ್ನು ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಗೂಡು ದೀಪ ಸ್ಪರ್ಧೆಯು ಪೂರಕವಾಗಿದ್ದು, ಇಂತಹ ಕಾರ್ಯಕ್ರಮಗಳಲ್ಲಿ ಯುವಜನರನ್ನು ಹೆಚ್ಚಾಗಿ ತೊಡಗಿಸಿಕೊಳ್ಳುವ ಅಗತ್ಯತೆಯಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕದ್ರಿ ನವನೀತ್ ಶೆಟ್ಟಿ ಹೇಳಿದರು.

Advertisement

ಕಾಪು ಬ್ಲಾಕ್ ಕಾಂಗ್ರೆಸ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಮಂಗಳವಾರ ಕಾಪು ರಾಜೀವ ಭವನದ ಮುಂಭಾಗದಲ್ಲಿ ಜರಗಿದ ದೀಪಾವಳಿ ಅಚರಣೆ ಹಾಗೂ ಗೂಡುದೀಪ ಸ್ಪರ್ಧೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ದೇಶದ ಜನರಲ್ಲಿ ಐಕ್ಯತೆ ಮತ್ತು ಸೌಹಾರ್ದತೆಯನ್ನು ಹೆಚ್ಚಿಸುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಸ್ಮರಣೀಯವಾಗಿದೆ. ಕಾಂಗ್ರೆಸ್ ಪಕ್ಷ ನಿರಂತರವಾಗಿ ಜನರೊಂದಿಗೆ ಇದ್ದು ಜನರ ಸಂಸ್ಕೃತಿ, ಸಂಸ್ಕಾರ, ಆಚಾರ ಮತ್ತು ವಿಚಾರಗಳನ್ನು ಅನುಸರಿಸಿಕೊಂಡು ಬರುತ್ತಿದೆ. ಅದಕ್ಕೆ ಪೂರಕವಾಗಿ ಕಾಪುವಿನಲ್ಲಿ ಪ್ರಥಮ ಬಾರಿಗೆ ಗೂಡು ದೀಪ ಸ್ಪರ್ಧೆಯನ್ನು ಆಯೋಜಿಸಿ, ಸಂಪ್ರಧಾಯದ ಅನುಸರಣೆಗೆ ಮಹತ್ವ ನೀಡಲಾಗಿದೆ ಎಂದರು.

ಇದನ್ನೂ ಓದಿ:ಜಾಗತಿಕ ಮಾನ್ಯತೆ!: ಕೋವಾಕ್ಸಿನ್ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ

ಸಮ್ಮಾನ, ಗೌರವಾರ್ಪಣೆ : ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕದ್ರಿ ನವನೀತ್ ಶೆಟ್ಟಿ, ಕನ್ನಡ ಕಿರುತರೆ ನಟಿ ಅನ್ವಿತಾ ಸಾಗರ್, ಚಿತ್ರಕಲಾ ಕಲಾವಿದೆ ರಕ್ಷಾ ಪೂಜಾರಿ ಕಾಪು, ಉಡುಪಿ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಫಾರೂಕ್ ಚಂದ್ರನಗರ ಅವರನ್ನು ಸಮ್ಮಾನಿಸಲಾಯಿತು. ಕಾರ್ಯಕ್ರಮ ಸಂಯೋಜಕರಾದ ಸುಧಾಕರ್ ಸಾಲ್ಯಾನ್, ಶಶಿಕಾಂತ್ ಅಚಾರ್ಯ, ವಿನೋದ್ ಮಾರ್ಟಿಸ್, ಅಶ್ವಿನಿ ಬಂಗೇರ ಅವರನ್ನು ಗೌರವಿಸಲಾಯಿತು.

Advertisement

ಕನ್ನಡ ಕಿರುತೆರೆ ನಟಿ ಅನ್ವಿತಾ ಸಾಗರ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಸಂಯೋಜಕ ಡಾಣ ದೇವಿಪ್ರಸಾದ್ ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶರ್ಪುದ್ದೀನ್ ಶೇಕ್, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಮೊದಲಾದವರು ಉಪಸ್ಥಿತರಿದ್ದರು.

ಕಾಪು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ದೀಪಕ್ ಎರ್ಮಾಳ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ವಂದಿಸಿದರು. ರಾಜೇಶ್ ಶೇರಿಗಾರ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next