Advertisement

ಕಾಪು: ಚಿರತೆ ಪತ್ತೆಗೆ ಬೋನು ಇರಿಸಿ ಕಾರ್ಯಾಚರಣೆಗೆ ಮುಂದಾದ ಅರಣ್ಯ ಇಲಾಖೆ

01:42 PM Dec 14, 2020 | Mithun PG |

ಕಾಪು:  ಕಾಪು ಪರಿಸರದಲ್ಲಿ ಕಳೆದ ಒಂದು ವಾರದಿಂದ ಅಡ್ಡಾಡುತ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಬೋನು ಇರಿಸಿ, ಕ್ರಮ ತೆಗೆದುಕೊಂಡಿದ್ದಾರೆ.

Advertisement

ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್ ಅವರ ಮನವಿಯ ಮೇರೆಗೆ ಆಗಮಿಸಿದ ಅರಣ್ಯ ಅಧಿಕಾರಿಗಳು ತೆಂಕು ಕಲ್ಯಾ ಬಳಿ ಬೋನನ್ನು ಇಟ್ಟಿದ್ದಾರೆ.

ಈ ಬಗ್ಗೆ ಕಾಪು ಉಪ ವಲಯ ಅರಣ್ಯ ಅಧಿಕಾರಿ ಜೀವನ್ ದಾಸ್ ಶೆಟ್ಟಿ ಮಾತನಾಡಿ,   ಚಿರತೆಯನ್ನು ಸೆರೆ ಹಿಡಿಯಲು ಬೇಕಾದ ಕ್ರಮ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸಾರ್ವಜನಿಕರು ಭಯಪಡುವ  ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್, ಪ್ರಸಾದ್ ಶೆಣೈ, ಫಾರೆಸ್ಟ್ ಗಾರ್ಡ್ ಗಳಾದ  ಮಂಜುನಾಥ್, ಅಭಿಲಾಷ್ ಮತ್ತಿತರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next