Advertisement

Kapu;ಕೊಪ್ಪಲಂಗಡಿ: ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಪಲ್ಟಿ

05:57 PM Feb 10, 2024 | Team Udayavani |

ಕಾಪು : ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

Advertisement

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಡ್ಡ ಬಿದ್ದಿದ್ದು ಟೆಂಪೋದಲ್ಲಿದ್ದ ಸಾಮಾಗ್ರಿಗಳು ರಸ್ತೆಗೆ ಅಡ್ಡ ಬಿದ್ದಿವೆ. ಟೆಂಪೋ ಕೂಡ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ಚಾಲಕ ಮತ್ತು ಟೆಂಪೋದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಟೆಂಪೋ ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಪರಿಣಾಮ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next