Advertisement

Kapu: ಫಿಟ್ಸ್‌ನಿಂದಾಗಿ ಕುಸಿದು ಬಿದ್ದು ಕಾರ್ಮಿಕ ಸಾವು

01:38 AM Jan 17, 2024 | Team Udayavani |

ಕಾಪು: ಹಾವೇರಿಯಿಂದ ಕೂಲಿ ಕೆಲಸಕ್ಕಾಗಿ ಬಂದಿದ್ದ ಕಾರ್ಮಿಕನೋರ್ವ ಫಿಟ್ಸ್‌ನಿಂದಾಗಿ ಕೆಲಸ ಮಾಡುತ್ತಿದ್ದಾಗಲೇ ಬಿದ್ದು ಮೃತಪಟ್ಟ ಘಟನೆ ಮಲ್ಲಾರು ಗ್ರಾಮದ ಕೊಂಬಗುಡ್ಡೆಯಲ್ಲಿ ಸೋಮವಾರ ನಡೆದಿದೆ.

Advertisement

ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕು ನಿವಾಸಿ ಇವರ ಮಗ ಶಿವರಾಜ ಕನಿಕೇರ (33) ಮೃತ ವ್ಯಕ್ತಿ.

ಸೋಮವಾರ ಮಧ್ಯಾಹ್ನ ಕಾಪುವಿನ ಭಾರತ್‌ ನಗರದಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದಾಗ ಫಿಟ್ಸ್‌ ಬಂದು ಕೆಳಗೆ ಬಿದ್ದಿದ್ದು ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಸುಮಾರು 5-6 ವರ್ಷಗಳ ಹಿಂದೆ ಕೂಲಿ ಕೆಲಸಕ್ಕಾಗಿ ಕಾಪುವಿಗೆ ಬಂದಿದ್ದ ಶಿವರಾಜ ಮಲ್ಲಾರು ಗ್ರಾಮದ ಕೊಂಬಗುಡ್ಡೆ ಎಂಬಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next