Advertisement

ನಿರಾಶ್ರಿತರಿಗೆ ನಾಲ್ಕು ಕಡೆ ಗಂಜಿ ಕೇಂದ್ರ ಸ್ಥಾಪನೆಗೆ ನಿರ್ಧಾರ: ಶಾಸಕ ಲಾಲಾಜಿ

07:53 PM Mar 29, 2020 | Sriram |

ಕಾಪು: ಕೋವಿಡ್-19 ಆತಂಕದ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್‌ಡೌನ್‌ ಆದೇಶ ಜಾರಿಯಲ್ಲಿದ್ದು ಇದರಿಂದಾಗಿ ಕಾಪು ತಾಲೂಕಿನ ವಿವಿಧೆಡೆ ನಿರಾಶ್ರಿತರ ಸಂಖ್ಯೆ ಹೆಚ್ಚಾಗುತ್ತಿದೆ. ತಾಲೂಕಿನ ವಿವಿಧೆಡೆಗಳಲ್ಲಿ ಆಹಾರದ ಅಗತ್ಯತೆ ಯಿರುವ ಜನರಿಗೆ ಆಹಾರ ಪೂರೈಸಲು ನಾಲ್ಕು ಕಡೆಗಳಲ್ಲಿ ಗಂಜಿ ಕೇಂದ್ರಗಳನ್ನು ತೆರೆಯ ಲಾಗುವುದು ಎಂದು ಶಾಸಕ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

Advertisement

ಕಾಪು ತಾಲೂಕು ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಕೋವಿಡ್-19 ಆತಂಕ ನಿವಾರಣೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಕೈಗೊಳ್ಳಲಾಗಿರುವ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ರವಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಾಪು ತಾಲೂಕಿನ ಕಾಪು, ಪಡುಬಿದ್ರಿ, ಶಿರ್ವ ಮತ್ತು ಕಟಪಾಡಿಯಲ್ಲಿ ಗಂಜಿ ಕೇಂದ್ರ ತೆರೆಯಲಾಗು ವುದು. ಅದರ ಜತೆಗೆ ಪಡಿತರ ಸಾಮಗ್ರಿ ಅಗತ್ಯ ಇರುವವರಿಗೆ ಪಡಿತರ ವಿತರಣೆಗೂ ಯೋಜನೆ ರೂಪಿಸಲಾಗುತ್ತಿದೆ. ಈವರೆಗೆ ಸುಮನಾರು 1000 ಮಂದಿ ಇದಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಈ ವ್ಯವಸ್ಥೆಯ ಅನುಷ್ಠಾನಕ್ಕೆ ಸರಕಾರ ಮತ್ತು ಖಾಸಗಿಯವರ ಸಹಭಾಗಿತ್ವವನ್ನು ಪಡೆದುಕೊಳ್ಳಲಾಗುವುದು ಎಂದರು.

ಕಾಪು ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌, ಕಾಪು ವೃತ್ತ ನಿರೀಕ್ಷಕ ಮಹೇಶ್‌ ಪ್ರಸಾದ್‌, ಕಂದಾಯ ಪರಿವೀಕ್ಷಕ ರವಿಶಂಕರ್‌, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಬ್ರಾಯ ಕಾಮತ್‌ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಲಾಕ್‌ಡೌನ್‌ ಯಶಸ್ವಿ
ಕೋವಿಡ್-19 ಹರಡದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಾಪು ತಾಲೂಕಿನ ವಿವಿಧೆಡೆಗಳಲ್ಲಿ ಸುಮಾರು 90 ಮಂದಿ ಹೋಮ್‌ ಕ್ವಾರಂಟೈನ್‌ನಲ್ಲಿ ಇದ್ದು ಅವರೆಲ್ಲರೂ ವ್ಯವಸ್ಥೆಯೊಂದಿಗೆ ಸಹಕರಿಸುತ್ತಿದ್ದಾರೆ. ತಾಲೂಕಿನಾದ್ಯಂತ ಲಾಕ್‌ಡೌನ್‌ ಯಶಸ್ವಿಯಾಗಿದ್ದು ಸಾರ್ವಜನಿಕರ ಸಹಕಾರ, ಪೊಲೀಸರ ಪ್ರಯತ್ನವೇ ಇದಕ್ಕೆ ಕಾರಣವಾಗಿದೆ.
-ಲಾಲಾಜಿ ಮೆಂಡನ್‌, ಶಾಸಕರು

Advertisement
Advertisement

Udayavani is now on Telegram. Click here to join our channel and stay updated with the latest news.

Next