Advertisement

ಕಾಪು ಶಾಸಕ ಲಾಲಾಜಿ‌ ಆರ್. ಮೆಂಡನ್ ಅವರಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ

01:18 PM Jun 28, 2022 | Team Udayavani |

ಕಾಪು: ಕಾಪು ಪುರಸಭೆ ವ್ಯಾಪ್ತಿ ಹಾಗೂ ತಾಲೂಕಿನ ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement

ಈ ಸಂದರ್ಭ ಮಾತನಾಡಿದ ಅವರು, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಆದ್ಯತೆಯ ಮೇರೆಗೆ ಮನೆ ನಿವೇಶನ ಮತ್ತು ಅನುದಾನ ಮಂಜೂರಾತಿ ಪತ್ರ ನೀಡಲಾಗಿದೆ. ದಿವ್ಯಾಂಗರ ಸಮಸ್ಯೆಗೆ ಸ್ಪಂಧಿಸಿ ಸಹಕಾರ ನೀಡಲಾಗುತ್ತಿದೆ. ಇದಕ್ಕಾಗಿ ಪುರಸಭೆಯ ಮೀಸಲು ಹಣವನ್ನು ಬಳಸಿಕೊಳ್ಳಲಾಗುತ್ತಿದ್ದು  ಆದ್ಯತೆಯ ಮೇರೆಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದರು.

ಕಾಪು ಪುರಸಭೆಗೆ ನಗರೋತ್ಥಾನ ಯೋಜನೆಯಡಿ 10 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಟೆಂಡರ್  ಹಂತದಲ್ಲಿದೆ. 56 ಕೋಟಿ ರೂಪಾಯಿ ವೆಚ್ಚದಲ್ಲಿ ಕುರ್ಕಾಲು ಡ್ಯಾಂನಿಂದ ಕಾಪು ನಗರಕ್ಕೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಬೆಳಪು ಅತ್ಯಾಧುನಿಕ ವಿಜ್ಞಾನ ತಂತ್ರಜ್ಞಾನ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಹೆಚ್ಚುವರಿ 15 ಕೋಟಿ ರೂ. ಗೆ ಪ್ರಸ್ತಾವನೆ‌ ಸಲ್ಲಿಸಲಾಗಿದೆ. ಕಾಪು ಕ್ಷೇತ್ರದ ಐಟಿಐ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರು‌.

ಹೆಜಮಾಡಿ ಬಂದರು ಅಭಿವೃದ್ಧಿಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು ಪೊಲಿಪು ಮತ್ತು ಮೂಳೂರಿನಲ್ಲಿ ಕಡಲ್ಕೊರೆತ ತಡೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

Advertisement

ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಅಂಗವಿಕಲ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರತ್ನಾ ಸುವರ್ಣ, ಪುರಸಭೆ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಸ್ವಾಗತಿಸಿದರು. ರವಿಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next