Advertisement

Kapu ಅಡ್ಡಾದಿಡ್ಡಿ ಕಾರು ಚಾಲನೆ: ಪ್ರಕರಣ ದಾಖಲು

12:14 AM Oct 28, 2023 | Team Udayavani |

ಕಾಪು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿಕೊಂಡು ಬಂದ ಚಾಲಕನ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಉಡುಪಿಯಿಂದ ಕಟಪಾಡಿಯತ್ತ ಬರುತ್ತಿದ್ದ ಮಟ್ಟು ನಿವಾಸಿ ಸತೀಶ್‌ ನಿರ್ಲಕ್ಷéತನದಿಂದ ಕಾರು ಚಲಾಯಿಸುತ್ತಾ ಬಂದಿದ್ದು, ಈ ಬಗ್ಗೆ ಮಾಹಿತಿ ಪಡೆದ ಕಾಪು ಪೊಲೀಸ್‌ ಠಾಣಾಧಿಕಾರಿ ಹಾಗೂ ಸಿಬಂದಿ ಕಟಪಾಡಿ ಜಂಕ್ಷನ್‌ನಲ್ಲಿ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದ್ದರು.

ಈ ವೇಳೆ ಕಾರು ಚಾಲಕ ಮದ್ಯಪಾನ ಮಾಡಿರುವ ವಿಚಾರ ಗಮನಕ್ಕೆ ಬಂದಿದ್ದು, ಆರೋಪಿಯ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next