Advertisement

ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ

08:36 PM Jan 04, 2025 | Team Udayavani |

ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಅಣಿಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾರ್ಚ್ 5 ರವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯೊಂದಿಗೆ ಶನಿವಾರ ಜಂಟಿ ಸಮಾಲೋಚನಾ ಸಭೆ ನಡೆಯಿತು.

Advertisement

ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರು ಜೀರ್ಣೋದ್ಧಾರ ಕಾರ್ಯ ನಡೆದು ಬಂದ ದಾರಿ, ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಆಗಬೇಕಾದ ವ್ಯವಸ್ಥೆಗಳ ಜೋಡಣೆ ಮತ್ತು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪುರಸಭೆಯ ಸಹಕಾರ ಯಾಚಿಸಿದರು.

ಜಿಲ್ಲಾಽಕಾರಿ ಡಾ| ವಿದ್ಯಾ ಕುಮಾರಿ ಮಾತನಾಡಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪ್ರಪಂಚದಾದ್ಯಂತ ಲಕ್ಷಾಂತರ ಮಂದಿ ಭಕ್ತರು, ಧಾರ್ಮಿಕಾಸಕ್ತರು ಪಾಲ್ಗೊಳ್ಳಲಿದ್ದಾರೆ. ಒಂಬತ್ತು ದಿನಗಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದಿಯಾಗಿ ರಾಜ್ಯ ಮತ್ತು  ಕೇಂದ್ರ ಸಚಿವರುಗಳ ಸಹಿತ ವಿವಿಧ ಗಣ್ಯರು, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗವಹಿಸುವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಮಾರಿಗುಡಿ ಸುತ್ತಮುತ್ತಲಿನಲ್ಲಿ ಸುಸಜ್ಜಿತ ವ್ಯವಸ್ಥೆಗಳ ಜೋಡಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ, ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಪುರಸಭೆ ಸಹಿತ ವಿವಿಧ ಇಲಾಖೆಗಳು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯೊಂದಿಗೆ ಕೈ ಜೋಡಿಸಲಿದೆ ಎಂದರು.

Advertisement

ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಪರಮೇಶ್ವರ ಎ. ಹೆಗಡೆ, ಎಸ್. ಟಿ. ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಮ್ಯಾನೇಜರ್ ಅಬ್ದುಲ್ ಜಾವೇದ್ ಅಜ್ಮಿ, ಟೋಲ್ ಮ್ಯಾನೇಜರ್ ತಿಮ್ಮಯ್ಯ, ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್., ಪುರಸಭೆ ಮುಖ್ಯಾಧಿಕಾರಿ ನಾಗರಾಜ್ ಸಿ., ಕಾಪು ಪೊಲೀಸ್ ವೃತ್ತ ನಿರೀಕ್ಷಕಿ ಜಯಶ್ರೀ ಎಸ್. ಮಾನೆ, ಕಾಪು ಎಸ್ಸೈ ತೇಜಸ್ವಿ, ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಲಾಲಾಜಿ ಆರ್. ಮೆಂಡನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷರಾದ ಮನೋಹರ ಎಸ್. ಶೆಟ್ಟಿ, ಮಾಧವ ಆರ್. ಪಾಲನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ನವದುರ್ಗಾ ಲೇಖನ ಸಮಿತಿ ಕಾರ್ಯದರ್ಶಿ ಕೆ. ವಿಶ್ವನಾಥ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ಸಾಲ್ಯಾನ್, ಮನೋಹರ ರಾವ್, ಜಯಲಕ್ಷ್ಮೀ ಎಸ್. ಶೆಟ್ಟಿ, ಚರಿತಾ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ ಪ್ರಸ್ತಾವನೆಗೈದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next