Advertisement

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದ ಸೂರ್ಯಕುಮಾರ್‌ ದಂಪತಿ

01:23 PM Jul 09, 2024 | Team Udayavani |

ಕಾಪು : ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಶೆಟ್ಟಿ ಅವರೊಂದಿಗೆ ಮಂಗಳವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.

Advertisement

ಹೊಸ ಮಾರಿಗುಡಿಯ ಮಾರಿಯಮ್ಮ ದೇವಿಯ ದರುಶನ ಪಡೆದ ಬಳಿಕ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಿಲಾಮಯ ದೇವಸ್ಥಾನದ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭ ಅವರು ಮುಖಮಂಟಪದ ಶಿಲಾಸ್ತಂಭ ಸಹಿತ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಿದರು.

ದೇಗುಲದ ಪ್ರಧಾನ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ,  ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರು ಮಾರಿಯಮ್ಮ ದೇವಿಯ ಪ್ರಸಾದ ನೀಡಿ ಗೌರವಿಸಿದರು.

ಕಾಪು ಶಾಸಕ ಮತ್ತು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿ, ಅನಿಲ್ ಬಲ್ಲಾಳ್ ಕಾಪು ಬೀಡು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾಧಿಕಾರಿ ರವಿಕಿರಣ್, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಉದಯ ಸಂದರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ  ಉಪಾಧ್ಯಕ್ಷರಾದ ಮನೋಹರ್ ಎಸ್. ಶೆಟ್ಟಿ, ಮಾಧವ ಆರ್. ಪಾಲನ್, ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ವಿವಿಧ ಸಮಿತಿಗಳ ಪ್ರಮುಖರು, ಸದಸ್ಯರು, ಭಕ್ತಾಧಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next