Advertisement

ಕಾಪು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

11:52 AM Jul 08, 2022 | Team Udayavani |

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ವಿದ್ಯಾನಿಕೇತನ ಶಾಲೆಯ ಮುಂಭಾಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

Advertisement

ಮಂಗಳೂರು ಕಡೆಯಿಂದ ಉಡುಪಿ ಕಡೆ ಸಾಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಪವಾಢ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಒಬ್ಬರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು, ಉಳಿದ ಮೂವರು ಯಾವುದೇ ಪ್ರಾಣ ಅಪಾಯ ಇಲ್ಲದೆ ಪಾರಾಗಿದ್ದಾರೆ.

ಇದನ್ನೂ ಓದಿ: ಕಾಪು: ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ಲಿಕ್ವಿಡ್‌ ಸೋರಿಕೆ; ಸ್ಥಳೀಯರಲ್ಲಿ ಆತಂಕ

Advertisement

ಕಾರು ಪಲ್ಟಿಯಾದ ಸದ್ದು ಕೇಳಿದ  ಸ್ಥಳೀಯರು ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next