Advertisement
ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಆತಿಥ್ಯದಲ್ಲಿ ಗುರುವಾರ ಮೂಳೂರು ಸಾಯಿರಾಧಾ ಹೆರಿಟೇಜ್‌ನಲ್ಲಿ “ಸುಸ್ಥಿರ ಪ್ರವಾಸ ಹಾಗೂ ಕೊನೆಯಿಲ್ಲದ ನೆನಪುಗಳು’ – ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಪ್ರಚಾರಕರು ಹಾಗೂ ಪ್ರವಾಸೋದ್ಯಮ ಪಾಲುದಾರರ ಜತೆಗೆ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕರಾವಳಿಯ ಪ್ರಕೃತಿ ಪ್ರವಾಸಿಗರನ್ನು ಸೆಳೆಯಲು ಪೂರಕವಾಗಿದ್ದು, ಇದು ನಮಗೆ ದೇವರು ನೀಡಿರುವ ದೊಡ್ಡ ಕೊಡುಗೆ. ಇದರೊಂದಿಗೆ ತುಳುನಾಡಿನ ಪ್ರಾಕೃತಿಕ ಪರಿಸರ, ಧಾರ್ಮಿಕ, ಸಾಂಸ್ಕೃತಿಕ, ಮನೋರಂಜನ ಕೇಂದ್ರ ಗಳನ್ನು ಪ್ರವಾಸೋದ್ಯಮಕ್ಕೆ ಪೂರಕವಾಗಿ ಬೆಳೆಸಿದಲ್ಲಿ ಟೂರಿಸಂ ಇನ್ನಷ್ಟು ಎತ್ತರಕ್ಕೆ ಬೆಳೆಸಲು ಸಾಧ್ಯವಾಗಲಿದೆ ಎಂದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಬ್ಲಾಗರ್ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿ, ಪ್ರವಾಸೋದ್ಯಮ ಬೆಳೆಯುವಲ್ಲಿ ಸಾರ್ವಜನಿಕರ ಸಹಭಾಗಿ ತ್ವವೂ ಅತ್ಯಗತ್ಯ. ಕರಾವಳಿಯುದ್ದಕ್ಕೂ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಕರಾವಳಿ ಪ್ರವಾಸೋದ್ಯಮವನ್ನು ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿಯೂ ಬೆಳೆಸುವ ಅನಿವಾರ್ಯ ಇದೆ ಎಂದರು.
Related Articles
Advertisement
ಕರಾವಳಿ ಪ್ರವಾಸೋದ್ಯಮ ಸಂಘದ ಅಧ್ಯಕ್ಷ ಮನೋಹರ ಶೆಟ್ಟಿ ಪ್ರಸ್ತಾವನೆಗೈದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಸ್ವಾಗತಿಸಿ, ಉಪಾಧ್ಯಕ್ಷ ನಾಗರಾಜ ಹೆಬ್ಬಾರ್ ವಂದಿಸಿದರು. ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.