ಕಾಪು: ಕೋವಿಡ್ 19 ಕಾರಣದಿಂದ ಒಂದೂವರೆ ವರ್ಷಗಳಿಂದ ನಿಂತು ಹೋಗಿದ್ದ ಶೈಕ್ಷಣಿಕ ಚಟುವಟಿಕೆಗಳು ಮತ್ತೆ ಪುನರಾರಂಭಗೊಂಡಿದ್ದು ಕಾಪು ವಿದ್ಯಾನಿಕೇತನ ಸಮೂಹ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಸೋಮವಾರ ಅದ್ದೂರಿ ಮತ್ತು ವೈಶಿಷ್ಟ್ಯಪೂರ್ಣವಾಗಿ ಶಾಲೆಗೆ ಬರಮಾಡಿಕೊಳ್ಳಲಾಯಿತು.
ಹುಲಿವೇಷ, ಗೊಂಬೆ ಕುಣಿತ ಸಹಿತವಾದ ಮನೋರಂಜನಾ ಕಾರ್ಯಕ್ರಮಗಳೊಂದಿಗೆ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಭೌತಿಕ ತರಗತಿಗಳ ಆರಂಭ ಮತ್ತು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಶೈಕ್ಷಣಿಕ ವರ್ಷದ ತರಗತಿ ಆರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು.
ಉದ್ಯಮಿ ಮತ್ತು ಸಮಾಜ ಸೇವಕ ಸುರೇಶ್ ಪಿ. ಶೆಟ್ಟಿ ಗುರ್ಮೆ, ಎಸ್.ಡಿ.ಎಂ. ಆಯುರ್ವೇದ ಆಸ್ಪತ್ರೆಯ ಡಾ. ಮುರಳೀಧರ ರಾವ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ, ಪ್ರೇಮ್ ಕುಮಾರ್ ಕಟಪಾಡಿ, ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ, ವಿದ್ಯಾನಿಕೇತನ ಸಮೂಹ ಸಂಸ್ಥೆಗಳ ಸಂಚಾಲಕ ಕೆ. ಪಿ. ಆಚಾರ್ಯ, ಸಹ ಸಂಚಾಲಕಿ ಶ್ವೇತಾ ಆಚಾರ್ಯ, ಪ್ರಾಂಶುಪಾಲ ಕಿಶೋರ್ ಶೆಟ್ಟಿ, ಉಪ ಪ್ರಾಂಶುಪಾಲ ಸಾಕ್ಷಾತ್ ಯು.ಕೆ. ಮೊದಲಾದರು ಉಪಸ್ಥಿತರಿದ್ದರು.
ಇದನ್ನೂ ಓದಿ:ರಮಣಶ್ರೀ ಶರಣ ಜೀವಮಾನ ಸಾಧಕ ಸನ್ಮಾನಕ್ಕೆ ಡಾ.ಗುರುರಾಜ ಕರ್ಜಗಿ ಆಯ್ಕೆ
ಕೋವಿಡ್ ಕಾರಣದಿಂದಾಗಿ ಒಂದೂವರೆ ವರ್ಷಗಳ ಬಳಿಕ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು ಕ್ಯಾಂಪಸ್ ನ ಒಳಗೆ ಹುಲಿ ವೇಷ, ಸೆಲ್ಪೀ ಫ್ರೇಮ್, ಗೊಂಬೆ ಪ್ರದರ್ಶನ ಸಹಿತ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಕಂಡು ಸಂಭ್ರಮಿಸಿದರು.