ಕರಾಚಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ (ಎಲ್‌ಇಟಿ) ಮೋಸ್ಟ್ ವಾಂಟೆಡ್ ನಾಯಕರಲ್ಲಿ ಒಬ್ಬನಾದ ಮುಫ್ತಿ ಖೈಸರ್ ಫಾರೂಕ್ ರನ್ನು ಕರಾಚಿಯಲ್ಲಿ ‘ಅಪರಿಚಿತ ವ್ಯಕ್ತಿಗಳು’ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ಭಾನುವಾರ ತಿಳಿಸಿವೆ.
ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯರಲ್ಲಿ ಒಬ್ಬನಾದ ಖೈಸರ್ ಫಾರೂಕ್, 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ನಿಕಟ ಸಹವರ್ತಿ.
ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ಸಮನಾಬಾದ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಖೈಸರ್ ಫಾರೂಕ್ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಬೆನ್ನಿಗೆ ಗುಂಡು ತಗುಲಿದ ಫಾರೂಕ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ
ಫಾರೂಕ್ ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ; ಆದರೆ, ಪೊಲೀಸರು ಈ ದೃಶ್ಯಾವಳಿಗಳ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ದಾಳಿಯ ವೇಳೆ ಓರ್ವ ಅಪ್ರಾಪ್ತ ವಯಸ್ಕ ಬಾಲಕನೂ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.