ಕೊಪ್ಪಳ : ಬಿಜೆಪಿ ಟಿಕೆಟ್ ವಂಚಿತ ಸಂಸದ ಸಂಗಣ್ಣ ಕರಡಿ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಸೇರ್ಪಡೆಗೊಂಡರು.
ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಕರಡಿ ಸಂಗಣ್ಣ ಅವರಿಗೆ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಇದೇ ವೇಳೆ ಕರಡಿ ಸಂಗಣ್ಣ ಅವರ ಅಪಾರ ಬೆಂಬಲಿಗರು ಸಹ ಕಾಂಗ್ರೆಸ್ ಸೇರಿದರು.
ಈ ವೇಳೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ, ಹಂಪನಗೌಡ ಬಾದರ್ಲಿ, ಲಕ್ಷ್ಮಣ್ ಸವದಿ, ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಮಾಜಿ ಸಚಿವ ಎಚ್.ಎಂ. ರೇವಣ್ಣ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ