Advertisement
ವಿಶ್ವವಿಖ್ಯಾತ ಬೆಂಗಳೂರು ಕರಗ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಸ್ಥಾನದಿಂದ ಹೊರಟ ಹಾದಿಯಲ್ಲಿ ಶನಿವಾರ ನಸುಕಿನಲ್ಲಿ ಕಂಡು ಬಂದ ದೃಶ್ಯಗಳಿವು.
Related Articles
Advertisement
ಕರಗ ಸಾಗಿದ ಹಾದಿ: ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಿಂದ ಹೊರಟ ಕರಗವು ಮೊದಲಿಗೆ ಅಲಸೂರುಪೇಟೆ ಆಂಜನೇಯಸ್ವಾಮಿ, ಶ್ರೀರಾಮ ದೇವಾಲಯ ಮತ್ತು ಪ್ರಸನ್ನ ಗಂಗಾಧರೇಶ್ವರ ದೇವಾಲಯಗಳಲ್ಲಿ ಪೂಜಾ ಕಾರ್ಯ ನೆರವೇರಿಸಿ, ನಗರ್ತಪೇಟೆ ವೇಣುಗೋಪಾಲಸ್ವಾಮಿ ದೇವಾಲಯ ಸಿದ್ದಣ್ಣ ಗಲ್ಲಿ, ಬೈರೇದೇವರ ದೇವಾಲಯ, ಕಬ್ಬನ್ ಪೇಟೆಯ 14ನೇ ಅಡ್ಡರಸ್ತೆ ಶ್ರೀರಾಮ ಸೇವಾ ಮಂದಿರ, 15ನೇ ಅಡ್ಡರಸ್ತೆ ಮತ್ತು ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು.
ಅಲ್ಲಿಂದ ಮಕ್ಕಳ ಬಸವಣ್ಣಗುಡಿ, ಗಾಣಿಗರಪೇಟೆ, ಚನ್ನರಾಯಸ್ವಾಮಿ ದೇವಸ್ಥಾನ, ಚಾಮುಂಡೇಶ್ವರಿ ದೇವಸ್ಥಾನದಿಂದ ಅವೆನ್ಯೂ ರಸ್ತೆಯ ಈಶ್ವರ ದೇವಾಲಯದಲ್ಲಿ ಪೂಜಾ ಕಾರ್ಯ ನಡೆಸಿದ ಬಳಿಕ ದೊಡ್ಡಪೇಟೆ ಮೂಲಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸ್ವೀಕರಿಸಿ, ಕೆ.ಆರ್.ಮಾರುಕಟ್ಟೆ ಸಮೀಪದ ಉದ್ಭವ ಗಣಪತಿ ದೇವಾಲಯ, ಪೊಲೀಸ್ ರಸ್ತೆ ಮೂಲಕ ಮುರಹರಿಸ್ವಾಮಿ ಮಠ, ಬೀರೇದೇವರ ಗುಡಿ, ಅರಳೆಪೇಟೆ ಮುಖ್ಯರಸ್ತೆಯಲ್ಲಿ ಸಾಗಿತ್ತು. ಜತೆಗೆ ಮಸ್ತಾನ್ ಸಾಹೇಬರ ದರ್ಗಾದಲ್ಲಿ ಪೂಜೆ ಸ್ವೀಕರಿಸಿ ಬಳೆಪೇಟೆ, ಬಳೆ ಗರಡಿಗೆ ಆಗಮಿಸಿತು.
ಬಳಿಕ ಅಣ್ಣಮ್ಮ ದೇವಾಲಯ, ಕಿಲಾರಿ ರಸ್ತೆಯ ಶ್ರೀ ಧರ್ಮರಾಯಸ್ವಾಮಿ ದೇವಾಲಯ, ಯಲಹಂಕ ಗೇಟ್ ಆಂಜನೇಯಸ್ವಾಮಿ ದೇವಸ್ಥಾನ, ತುಪ್ಪದಾಂಜನೇಯಸ್ವಾಮಿ ಗುಡಿ, ಶ್ರೀರಂಗನಾಥಸ್ವಾಮಿ, ಚೌಡೇಶ್ವರಿ ಗುಡಿಯಲ್ಲಿ ಪೂಜೆ ನೆರವೇರಿಸಿತು. ಆನಂತರ ಕುಂಬಾರಪೇಟೆ ಮುಖ್ಯರಸ್ತೆ ಪ್ರವೇಶಿಸಿ, ಗೊಲ್ಲರಪೇಟೆ, ತಿಗಳರಪೇಟೆ, ಕುಲಬಾಂಧವರ ಮನೆಗಳಲ್ಲಿ ಪೂಜೆ ಸ್ವೀಕರಿಸಿ, ಹಾಲುಬೀದಿ, ಕಬ್ಬನ್‌ಪೇಟೆ ಮೂಲಕ ಸುಣಕಲ್‌ಪೇಟೆ ಮಾರ್ಗವಾಗಿ ಪುರೋಹಿತರ ಮನೆಗಳಲ್ಲಿ ಪೂಜೆ ಸ್ವೀಕರಿತು. ಕೊನೆಗೆ ನರಸಿಂಹ ಜೋಹಿಸ್ ಗಲ್ಲಿಯಲ್ಲಿ ಸಾಗಿ ಬೆಳಗಿನ ಬೆಳಗ್ಗೆ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಮರಳಿತು.
ಪಾರ್ಕಿಂಗ್ ವ್ಯವಸ್ಥೆ: ಕರಗ ನೋಡಲು ಬರುವ ಭಕ್ತರ ಅನುಕೂಲಕ್ಕಾಗಿ ಜೆ.ಸಿ.ರಸ್ತೆಯ ಮಹಾನಗರ ಪಾಲಿಕೆಯ ಪಾರ್ಕಿಂಗ್ ತಾಣದಲ್ಲಿ ವಾಹನಗಳ ನಿಲುಗಡೆ ಅವಕಾಶ ಕಲ್ಪಿಸಲಾಗಿತ್ತು. ಜತೆಗೆ ಕೆ.ಜಿ.ರಸ್ತೆಯ ಕೆಂಪೇಗೌಡ ಮಹಾರಾಜ ಕಾಂಪ್ಲೆಕ್ಸ್, ಮಾಮೂಲ್ ಪೇಟೆ ಮುಖ್ಯರಸ್ತೆಯಲ್ಲಿ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿತ್ತು.