Advertisement

ಬಬಲೇಶ್ವರ ಕ್ಷೇತ್ರದ ಕಾರಜೋಳ, ತಿಕೋಟಾ ಪಟ್ಟಣದಲ್ಲಿ ಕೋವಿಡ್ ಕೇರ್ ಕೇಂದ್ರ: ಎಂ.ಬಿ.ಪಾಟೀಲ

06:56 PM May 17, 2021 | Team Udayavani |

ವಿಜಯಪುರ : ಬಬಲೇಶ್ವರ ವಿಧಾನಸಭಾ ಕ್ಷೇತ್ರ್ರದಲ್ಲಿ ಕಾರಜೋಳ ಹಾಗೂ ತಿಕೋಟಾ ಪಟ್ಟಣದಲ್ಲಿ ಮೊದಲ ಹಂತದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುತ್ತಿದೆ ಎಂದು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಹೇಳಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಬಲೇಶ್ವರ ತಹಶೀಲ್ದಾರ ಮಲ್ಲಿಕಾರ್ಜುನ ಅರಕೇರಿ ಹಾಗೂ ತಿಕೋಟಾ ತಹಶೀಲ್ದಾರ ಸಂತೋಷ ಮ್ಯಾಗೇರಿ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಡಾ.ಕವಿತಾ ದೊಡಮನಿ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದು, ಪ್ರಥಮ ಹಂತದಲ್ಲಿ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಹಾಗೂ ತಿಕೋಟಾ ಪಟ್ಟಣದ ಬಿ.ಸಿ.ಎಂ ವಸತಿ ನಿಲಯ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ಹಾಸ್ಟೇಲ್ ನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ತಾಲೂಕು ಆಡಳಿತದಿಂದ ಅಗತ್ಯ ಕ್ರಮ ಜರುಗಿಸಲಾಗುತ್ತಿದೆ. ಪ್ರಥಮ ಹಂತದಲ್ಲಿ ಕಾರಜೋಳದಲ್ಲಿ 90 ಹಾಸಿಗೆಗಳ ಕೇಂದ್ರ ಆರಂಭಿಸಲಾಗುತ್ತಿದೆ. ಅಗತ್ಯವಿದ್ದರೆ ಬೇರೆ ಸ್ಥಳಗಳಲ್ಲಿಯೂ ವಿಸ್ತರಿಸಲಾಗುವುದು ಎಂದು ಎಂ.ಬಿ.ಪಾಟೀಲ ಹೇಳಿದ್ದಾರೆ.

ಇದನ್ನೂ ಓದಿ :ತಕ್ತೆ ಚಂಡಮಾರುತ; ಹಾನಿಗೆ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಗ್ರಾಮೀಣ ಪ್ರದೇಶದಲ್ಲಿ ಕೋರೊನಾ ಹಬ್ಬಿದ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಎಲ್ಲ ಕಡೆ ಮನೆ-ಮನೆ ಸರ್ವೇ ಮಾಡಿ, ರೋಗ ಲಕ್ಷಣಗಳನ್ನು ಗುರುತಿಸುವ ಕಾರ್ಯ ಆರಂಭ ಮಾಡಿರುವುದು ಸ್ವಾಗತಾರ್ಹ. ಅಂತವರಿಗೆ ಪ್ರಾಥಮಿಕ ಚಿಕಿತ್ಸೆಗೆ ಈ ಕೋವಿಡ್ ಕೇರ್ ಸೆಂಟರ ಗಳನ್ನು ಬಳಸಬಹುದು. ಸಾರ್ವಜನಿಕರು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಸ್ಥಳ, ಸಮುದಾಯ ಭವನಗಳು, ಶಾಲೆಗಳು, ಗೋಡಾವನಗಳು, ವಿಶಾಲ ಕಟ್ಟಡಗಳನ್ನು ಸ್ವಯಂ ಪ್ರೇರಿತವಾಗಿ ನೀಡಲು ಮುಂದೆ ಬರಬೇಕು ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ದಾಖಲಾದವರಿಗೆ ಎಲ್ಲ ರೀತಿಯ ನೆರವು ನೀಡಲು ದಾನಿಗಳು ಮುಂದಾಗಬೇಕು ಎಂದು ಎಂ.ಬಿ.ಪಾಟೀಲ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next