Advertisement

ವಸತಿ ಶಾಲೆಗಳ ಮಾಹಿತಿ ನೀಡಿದ ಕಾರಜೋಳ

11:42 PM Mar 04, 2020 | Team Udayavani |

ವಿಧಾನ ಪರಿಷತ್‌: ರಾಜ್ಯದಲ್ಲಿ 451 ವಸತಿ ಶಾಲೆಗಳು ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿವೆ. ಅವುಗಳಲ್ಲಿ 159 ಶಾಲಾ ಕಟ್ಟಡಗಳು ನಿರ್ಮಾಣ ಹಂತದಲ್ಲಿದ್ದು, 116 ಕಟ್ಟಡಗಳಿಗೆ ಸಮಗ್ರ ಯೋಜನಾ ವರದಿ(ಡಿಪಿಆರ್‌) ಸಿದ್ಧಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಸದನಕ್ಕೆ ತಿಳಿಸಿದರು.

Advertisement

ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಕೈಗೊಳ್ಳುವ ಕುರಿತು ಚರ್ಚೆಯಲ್ಲಿ ಕಾಂಗ್ರೆಸ್‌ ಸದಸ್ಯ ಎನ್‌.ಎಸ್‌.ಬೋಸರಾಜ್‌, ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಕೊಡುಗೆ ಏನೆಂಬುದನ್ನು ಸರ್ಕಾರ ತಿಳಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ವಾಜಪೇಯಿ ವಸತಿ ಶಾಲೆ ಸೇರಿ ಒಟ್ಟು 824 ವಸತಿ ಶಾಲೆಗಳಿವೆ. ಕಳೆದ ಆರು ತಿಂಗಳಲ್ಲಿ 116 ಶಾಲೆಗಳ ಕಟ್ಟಡಗಳ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧಪಡಿಸಲು ಸೂಚನೆ ನೀಡಿರುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next