Advertisement

ನೀವೂ ವೋಟ್ ಮಾಡಿ; ತುಮಕೂರಿನಲ್ಲಿ 111 ವರ್ಷದ ಸಿದ್ದಗಂಗಾಶ್ರೀ ಮತದಾನ

02:05 PM May 12, 2018 | Team Udayavani |

ತುಮಕೂರು: ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಮತದಾನ ನಡೆದಿದೆ. ಏತನ್ಮಧ್ಯೆ ಶತಾಯುಷಿ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ್ ಸ್ವಾಮೀಜಿ(111ವರ್ಷ) ಶನಿವಾರ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

Advertisement

ಭಾರತಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಪ್ರತಿಯೊಂದು ಚುನಾವಣೆಯಲ್ಲಿ ಸಿದ್ದಗಂಗಾಶ್ರೀಗಳು ತಪ್ಪದೆ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಗ್ರಾಮ ಪಂಚಾಯತ್ ಸೇರಿದಂತೆ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ ಹೆಗ್ಗಳಿಕೆ ಶ್ರೀಗಳದ್ದು.

ಈ ಬಾರಿಯೂ ಶ್ರೀಗಳು ಬೆಳಗ್ಗೆ ತಮ್ಮ ಎಲ್ಲಾ ಸಾಂಪ್ರದಾಯಿಕ ಕಾರ್ಯಗಳನ್ನು ಮುಗಿಸಿಕೊಂಡು ಮಠದ ಆವರಣದಲ್ಲಿರುವ ಸಿದ್ದಲಿಂಗೇಶ್ವರ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಬಂದು ಮತ ಚಲಾಯಿಸಿರುವುದು ಎಲ್ಲರಿಗೂ ಮಾದರಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next