Advertisement

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

09:31 AM Mar 08, 2024 | Team Udayavani |

ಇದೇ ಮೊದಲ ಬಾರಿಗೆ ನಟ ಶಿವರಾಜಕುಮಾರ್‌ ಮತ್ತು “ಇಂಡಿಯನ್‌ ಮೈಕಲ್‌ ಜಾಕ್ಸನ್‌’ ಖ್ಯಾತಿಯ ನಟ ಪ್ರಭುದೇವ ಜೋಡಿಯಾಗಿ ಅಭಿನಯಿಸಿರುವ “ಕರಟಕ ದಮನಕ’ ಇಂದು ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. “ರಾಕ್‌ಲೈನ್‌ ಎಂಟರ್‌ ಟೈನ್ಮೆಂಟ್ಸ್‌’ ಬ್ಯಾನರ್‌ನಲ್ಲಿ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಬಹುಕೋಟಿ ವೆಚ್ಚದಲ್ಲಿ ಬಂಡವಾಳ ಹೂಡಿ ನಿರ್ಮಿಸಿರುವ “ಕರಟಕ ದಮನಕ’ ಸಿನಿಮಾಕ್ಕೆ ಯೋಗರಾಜ್‌ ಭಟ್‌ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

Advertisement

ಈಗಾಗಲೇ ಬಿಡುಗಡೆಯಾಗಿರುವ “ಕರಟಕ ದಮನಕ’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್‌ ಮಾಸ್‌ ಆಡಿಯನ್ಸ್‌ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಸಿನಿಮಾ ಥಿಯೇಟರ್‌ನಲ್ಲೂ ಇಷ್ಟವಾಗಲಿದೆ ಎಂಬ ವಿಶ್ವಾಸದಲ್ಲಿದೆ ಚಿತ್ರತಂಡ.

ಕರಟಕ ದಮನಕ ಚಿತ್ರದ ಎರಡನೇ ಗೀತೆ ಡೀಗ ಡಿಗರಿ ಅಬುದಾಬಿಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್‌ ಭಟ್‌ ಅವರು ಬರೆದಿರುವ ಈ ಹಾಡನ್ನು ರಿಯಲ್‌ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್‌ ಕೃಷ್ಣನ್‌ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.

ಅಬುದಾಬಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಶಿವರಾಜಕುರ್ಮಾ, ಪ್ರಭುದೇವ, ಯೋಗರಾಜ್‌ ಭಟ್, ರಾಕ್‌ ಲೈನ್‌ ವೆಂಕಟೇಶ್‌ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಅವರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಸಹಸ್ರಾರು ಕನ್ನಡಿಗರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಹಾಡು ಬಿಡುಗಡೆಗೂ ಮುನ್ನ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.

“”ಕರಟಕ ದಮನಕ’ ಎಂಬುದು ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಯಾವಾಗಲೂ ಒಟ್ಟಿಗೆ ಇಬ್ಬರನ್ನು ಹೆಚ್ಚು ಸಲ ನೋಡಿದಾಗ ಅವರನ್ನು “ಕರಟಕ ದಮನಕ’ ಎನ್ನುತ್ತಾರೆ. ಇದು ಉತ್ತರ ಕರ್ನಾಟಕದಲ್ಲಿ ನಡೆಯುವ ಕಥೆ. ಈ ಸಿನಿಮಾ ನೋಡಿದ ಪ್ರತಿಯೊಬ್ಬ ವ್ಯಕ್ತಿಗೂ ಅವನ ಊರು, ಆ ಊರಿನಲ್ಲಿ ಎಳೆದ ತೇರು ಹಾಗೂ ಅವನು ಯಾವ ನೀರು ಕುಡಿದು ಬೆಳೆದಿದ್ದಾನೋ ಆ ನೀರು ನೆನಪಾಗುತ್ತದೆ’ ಎಂಬುದು “ಕರಟಕ ದಮನಕ’ ಸಿನಿಮಾದ ಬಗ್ಗೆ ನಿರ್ದೇಶಕ ಯೋಗರಾಜ್‌ ಭಟ್‌ ಮಾತು.

Advertisement

ಇನ್ನು ಸಿನಿಮಾದಲ್ಲಿ ಮೊದಲ ಬಾರಿಗೆ ನಟ ಪ್ರಭುದೇವ ಅವರೊಂದಿಗೆ ಅಭಿನಯಿಸಿದ್ದು, ಶಿವರಾಜಕುಮಾರ್‌ ಅವರಿಗೆ ತುಂಬ ಖುಷಿಕೊಟ್ಟಿದೆಯಂತೆ. “ಎಲ್ಲರಿಗೂ ಒಂದು ಊರು ಅಂಥ ಇರುತ್ತದೆ. ಆ ಊರನ್ನು ಬಿಟ್ಟು ಬಂದ ಮೇಲೆ ಪುನಃ ಹೋದಾಗ ಅಲ್ಲಿ ಸಾಕಷ್ಟು ಬದಲಾವಣೆ ಆಗಿರುತ್ತದೆ. ಆ ವಿಷಯ ಇಟ್ಟುಕೊಂಡು ಸಾಕಷ್ಟು ಮನೋರಂಜನೆಯ ಅಂಶಗಳೊಂದಿಗೆ ನಿರ್ದೇಶಕರು ಒಳ್ಳೆಯ ಕಥೆ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ಎಲ್ಲ ಥರದ ಆಡಿಯನ್ಸ್‌ಗೂ “ಕರಟಕ ದಮನಕ’ ಇಷ್ಟವಾಗಲಿದೆ’ ಎಂಬುದು ಶಿವರಾಜಕುಮಾರ್‌ ಮಾತು.

“ಈ ಹಿಂದೆ ಪುನೀತ್‌ ರಾಜಕುಮಾರ್‌ ಅವರೊಂದಿಗೆ ಅಭಿನಯಿಸಿದ್ದೆ. ಆದರೆ ಶಿವರಾಜಕುಮಾರ್‌ ಜೊತೆಗೆ ಅಭಿನಯಿಸುವ ಅವಕಾಶ ಸಿಕ್ಕಿರಲಿಲ್ಲ. ಈ ಸಿನಿಮಾದ ಮೂಲಕ ಶಿವಣ್ಣ ಜೊತೆಗೆ ಅಭಿನಯಿಸಬೇಕೆಂಬ ಆಸೆ ಕೂಡ ಈಡೇರಿದೆ. ತುಂಬ ಎನರ್ಜಿ ಇರುವಂಥ ಸಿನಿಮಾನ ಇದು. ರಾಕ್‌ಲೈನ್‌ ವೆಂಕಟೇಶ್‌ ಅದ್ದೂರಿಯಾಗಿ ಸಿನಿಮಾ ನಿರ್ಮಾಣ ಮಾಡಿ¨ªಾರೆ. ಯೋಗರಾಜ್‌ ಭಟ್‌ ನಿರ್ದೇಶನ ತುಂಬ ಚೆನ್ನಾಗಿದೆ’ ಎಂದು ಮೆಚ್ಚುಗೆಯ ಮಾತುಗಳು ನಟ ಪ್ರಭುದೇವ ಅವರದ್ದು.

“ಕರಟಕ ದಮನಕ’ ಸಿನಿಮಾದ ಹಾಡುಗಳಿಗೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ನಟ ಉಪೇಂದ್ರ, ರಾಜೇಶ್‌ ಕೃಷ್ಣನ್‌ ಮೊದಲಾದವರು ಸಿನಿಮಾದ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಸಿನಿಮಾಕ್ಕೆ ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣವಿದೆ. ಸದ್ಯ ಭರ್ಜರಿಯಾಗಿ ಪ್ರಚಾರದಲ್ಲಿ ನಿರತವಾಗಿರುವ “ಕರಟಕ ದಮನಕ’ ಹೇಗಿರಲಿದೆ ಎಂಬುದು ಈ ವಾರಾಂತ್ಯಕ್ಕೆ ಗೊತ್ತಾಗಲಿದೆ.

 ರವಿಪ್ರಕಾಶ್‌ ರೈ

Advertisement

Udayavani is now on Telegram. Click here to join our channel and stay updated with the latest news.

Next