Advertisement
ಸಾಮಾನ್ಯವಾಗಿ ಡಿಸೆಂಬರ್ ಅಂತ್ಯ ಅಥವಾ ಜನವರಿ ವೇಳೆಗೆ ಕರಾವಳಿ ಉತ್ಸವವು ಮಂಗಳೂರು ಕೇಂದ್ರೀಕೃತವಾಗಿ ನಡೆಯುತ್ತದೆ. ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ, ಕದ್ರಿ ಪಾರ್ಕ್
Related Articles
Advertisement
2019ರಲ್ಲಿ ಜನವರಿ 10ರಿಂದ ಕರಾವಳಿ ಉತ್ಸವ ಆರಂಭವಾಗಿ 9 ದಿನಗಳ ಕಾಲ ನಡೆದಿತ್ತು. ಉತ್ಸವದುದ್ದಕ್ಕೂ ರಾಜ್ಯದ ವಿವಿಧ ಜಿಲ್ಲೆಗಳ ಕಲಾ ತಂಡಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯ
ಕ್ರಮಗಳು ನಡೆದಿತ್ತು.
ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ, ಯುವ ಉತ್ಸವ ಕದ್ರಿ ಪಾರ್ಕ್
ನಲ್ಲಿ, ಪಣಂಬೂರಿನಲ್ಲಿ ಗಾಳಿಪಟ ಉತ್ಸವ ನಡೆದಿತ್ತು. ಬಳಿಕ ಲಾಲ್‌ಬಾಗ್ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತು ಪ್ರದರ್ಶನ ಮುಂದುವರಿದಿತ್ತು.
ಆದರೆ ಈ ವರ್ಷ ಕೋವಿಡ್ ಭೀತಿ ಇರುವ ಹಿನ್ನೆಲೆಯಲ್ಲಿ ಉತ್ಸವವನ್ನು ಎಷ್ಟು ದಿನಗಳಿಗೆ ಸೀಮಿತಗೊಳಿಸಬೇಕು ಎಂಬ ಬಗ್ಗೆ ಇನ್ನಷ್ಟೇ ನಿರ್ಧರಿಸಬೇಕಿದೆ.
ಆರ್ಥಿಕ ಚೇತರಿಕೆ ನಿರೀಕ್ಷೆ :
ಕೊರೊನಾ ಕಾರಣದಿಂದ ಸದ್ಯ ವ್ಯಾಪಾರ ಸಹಜ ಸ್ಥಿತಿಗೆ ಬರುತ್ತಿದ್ದು, ಕರಾವಳಿ ಉತ್ಸವ ಆರಂಭವಾದರೆ ಸ್ಥಳೀಯ ವ್ಯಾಪಾರ ವಹಿವಾಟಿಗೆ ಉತ್ತೇಜನ ಸಿಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಒಂದು ವಾರಗಳ ಕಾಲ ಕರಾವಳಿ ಉತ್ಸವ ನಡೆಯುತ್ತದೆ. ಸುಮಾರು ಒಂದು ತಿಂಗಳಿಗೂ ಹೆಚ್ಚು ಸಮಯ ವಸ್ತು ಪ್ರದರ್ಶನ ನಡೆಯುತ್ತದೆ. ಉತ್ಸವ ಆರಂಭಕ್ಕೆ ತಿಂಗಳ ಹಿಂದೆಯೇ ಇ-ಟೆಂಡರ್ ಕರೆಯಲಾಗುತ್ತದೆ. ಈ ವೇಳೆ ಲಕ್ಷಾಂತರ ರೂ.ಗೆ (2018ರಲ್ಲಿ 30 ಲಕ್ಷ ರೂ.) ಟೆಂಡರ್ ಮಾರಾಟವಾಗುತ್ತದೆ. ಅದೇ ರೀತಿ ಕರಾವಳಿ ಉತ್ಸವ ಮೈದಾನದಲ್ಲಿ ಪ್ರತೀ ವರ್ಷ ನಡೆಯುವ ವಸ್ತು ಪ್ರದರ್ಶನದಲ್ಲಿ ವಿವಿಧ ಜಿಲ್ಲೆ/ರಾಜ್ಯಗಳ ಹತ್ತಾರು ಮಳಿಗೆಗಳು ಇರುತ್ತವೆ.
ಸರಕಾರಕ್ಕೆ ಪತ್ರ :
ಕರಾವಳಿ ಉತ್ಸವಕ್ಕೆ ಸಂಬಂಧಪಟ್ಟಂತೆ ಸಿದ್ಧತೆ ನಡೆಸಲಾಗುತ್ತಿದೆ. ಸಾಮಾನ್ಯವಾಗಿ ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರದಿಂದ 20ರಿಂದ 30 ಲಕ್ಷ ರೂ. ಅನುದಾನ ಬಿಡುಗಡೆಯಾಗುತ್ತದೆ. ಈ ಬಾರಿ ಜನವರಿ ತಿಂಗಳಿನಲ್ಲಿ ಕರಾವಳಿ ಉತ್ಸವ ನಡೆಸುವ ಯೋಜನೆ ಹಾಕಿಕೊಂಡಿದ್ದು, ಅನುದಾನ ಬಿಡುಗಡೆ ಮಾಡುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪತ್ರ ಬರೆಯುತ್ತೇನೆ.– ಡಾ| ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ