Advertisement

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ ಕರವೇ ಪ್ರತಿಭಟನೆ

01:32 PM Nov 19, 2020 | keerthan |

ಯಾದಗಿರಿ: ರಾಜ್ಯ ಸರ್ಕಾರ ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಉತ್ತರ ಕರ್ನಾಟಕ ವಲಯ ಅಧ್ಯಕ್ಷ ಡಾ. ಶರಣು ಗದ್ದುಗೆ ನೇತೃತ್ವದಲ್ಲಿ ನಗರದ ನೇತಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಟಯರ್ ಸುಟ್ಟು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

ಈ ಸಂಧರ್ಭದಲ್ಲಿ ಮಾತನಾಡಿದ ಶರಣು ಗದ್ದುಗೆ, ಮುಖ್ಯಮಂತ್ರಿಗಳು ಮೊದಲು ಕನ್ನಡಿಗರ ಹಿತಕಾಪಾಡುವ ನಿರ್ಣಯ ತೆಗೆದುಕೊಳ್ಳದೆ ಕನ್ನಡ ರಾಜ್ಯೋತ್ಸವ ದಿನದಂದು ಬೆಳಗಾವಿಯಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡುವ ಎಂಇಎಸ್ ಪುಂಡಾಟಿಕೆಗೆ ಪ್ರೇರಣೆ ನೀಡಿದಂತಾಗಿದೆ, ಕೂಡಲೇ ಸರ್ಕಾರ ನಿಗಮ ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.

ಬೆಳಗಾವಿ ಲೋಕಸಭೆ ಹಾಗೂ ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆ ದೃಷ್ಟಿಯಿಂದ ನಿಗಮ ಸ್ಥಾಪನೆ ಮಾಡಿದೆ ಎಂದು ಟೀಕಿಸಿದರು.

ಸರ್ಕಾರ ಚಳಿಗಾಲದ ವಿಧಾನಸಭಾ ಅಧಿವೇಶನ ಬೆಳಗಾವಿಯಲ್ಲಿ ನಡೆಸುವ ಮೂಲಕ ಉತ್ತರ ಕರ್ನಾಟಕದ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಗಾಢ ನಿದ್ರೆಯಲ್ಲಿದ್ದ ಪತ್ನಿಯ ತಲೆಗೆ ದೊಣ್ಣೆಯಿಂದ ಹೊಡೆದು ಕೊಂದ ಪತಿ!

Advertisement

ಬುಧವಾರ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಕರ್ನಾಟಕದ ಬೆಳಗಾವಿ ಹಾಗೂ ಕಾರವಾರ ಜಿಲ್ಲೆಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಹೇಳಿಕೆ ನೀಡಿದ್ದನ್ನು ಖಂಡಿಸಿದರು.

ಪ್ರತಿಭಟನೆಯಲ್ಲಿ ಕರವೇಯ ಸಿದ್ದು ಪಾಟೀಲ, ಶರಣು ಇಟಿಗಿ, ಶಿವರಾಜ ಮಾನೆಗಾರ, ಶೇರ್ ಅಲಿ, ವಿಜಯ ಕುಮಾರ್, ಅಲ್ತಾಫರಾಝ, ರವಿ ಕುಮಾರ್ ದೇವರಮನಿ ಸೇರಿದಂತೆ ಹಲವಾರು ಕಾರ್ಯಕರ್ತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next