Advertisement

ಅರಬೈಲ್, ಗುಳ್ಳಾಪುರ : ನೆರೆಯಿಂದ ಹಾನಿಗೊಳಗಾದ ರಸ್ತೆ, ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮ

06:43 PM Jul 25, 2021 | Team Udayavani |

ಕಾರವಾರ: ಅರಬೈಲ್ ಘಟ್ಟ ಕುಸಿತ ಹಾಗೂ ಕಳಚೆಯ ಸಮೀಪ ಗುಡ್ಡ ಕುಸಿದು ರಸ್ತೆ ಸಂಚಾರ ಬಂದ್ ಆಗಿರುವ ಸಮಸ್ಯೆ ಪರಿಹಾರಕ್ಕೆ ಮುಂದಿನ ಕ್ರಮಗಳ ಬಗ್ಗೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಗಂಭೀರ ಚರ್ಚೆ ನಡೆಸಿದರು.

Advertisement

ಯಲ್ಲಾಪುರದಲ್ಲಿ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ನೆರೆಯಿಂದ ಜಿಲ್ಲೆಯಾದ್ಯಂತ ಉಂಟಾಗಿರುವ ಹಾನಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನಿನ್ನೆ ಲೋಕೋಪಯೋಗಿ ಸಚಿವರು ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕವಾಗಿ ಮಾತನಾಡಿ ಜಿಲ್ಲೆಯಲ್ಲಿ ಉಂಟಾಗಿರುವ ಹಾನಿಗಳ ಬಗ್ಗೆ ತಿಳಿಸಿ ತುರ್ತಾಗಿ ರಾಜ್ಯ ಮಟ್ಟದ ತಂಡವನ್ನು ಜಿಲ್ಲೆಗೆ ಕಳುಹಿಸುವಂತೆ ವಿನಂತಿಸಿದ್ದರು.

ರವಿವಾರ ರಾಜ್ಯ ಲೋಕೋಪಯೋಗಿ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಮಾನ್ಯ ಸಚಿವರು ಅರಬೈಲ್, ಗುಳ್ಳಾಪುರ ,ಕಳಚೆ ಹಾಗೂ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಹಾನಿಗೊಳಗಾದ ರಸ್ತೆ ಹಾಗೂ ಸೇತುವೆ ನಿರ್ಮಾಣ ಮಾಡುವ ಕುರಿತು ರೂಪರೇಶೆಗಳನ್ನು ಸಿದ್ದಪಡಿಸಿ ರಸ್ತೆ ನಿರ್ಮಾಣ ಮಾಡುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲುವಂತೆ ಹಾಗೂ ಶೀಘ್ರವಾಗಿ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ :ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

ಈ ಸಂದರ್ಭದಲ್ಲಿ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾರ್ಯದರ್ಶಿ ಶ್ರೀ ಕ್ರಷ್ಣ ರೆಡ್ಡಿ, ಲೋಕೋಪಯೋಗಿ ಮುಖ್ಯ ಇಂಜಿನಿಯರ್ ಎಸ್.ಎಫ್.ಪಾಟೀಲ್, ರಾಷ್ಟ್ರೀಯ ಹೆದ್ದಾರಿ ಮುಖ್ಯ ಇಂಜಿನಿಯರ್ ಗೋವಿಂದರಾಜು ಶಿರಸಿ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಕೃಷ್ಣ ರೆಡ್ಡಿ ಹಾಗೂ ಕಾರವಾರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ದೇವಿದಾಸ್ ಚೌಹಾನ್ ಹಾಗೂ ಸಹಾಯ ಅಭಿಯಂತರರು ಹಾಗೂ ಅಧಿಕಾರಿಗಳು, ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಪ್ರಮುಖರಾದ ಶ್ರೀ ವಿಜಯ ಮಿರಾಶಿ, ಶ್ರೀ ಗಣಪತಿ ಮುದ್ದೇಪಾಲ್ , ಪೋಲಿಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next