Advertisement
ಇನ್ನು ಈ ಚಿತ್ರದ ಪಾತ್ರವನ್ನು ಕರೀನಾ ಅವರಿಂದಲೇ ಮಾಡಿಸಬೇಕು ಎಂದುಕೊಂಡಿದ್ದ ಚಿತ್ರತಂಡ ಸುಮಾರು ಎರಡು ವರ್ಷ ಕರೀನಾಗಾಗಿ ಕಾದು ಬಳಿಕ ಈ ಸಿನಿಮಾವನ್ನು ಮಾಡುತ್ತಿದೆಯಂತೆ. ಸುಮಾರು ಹತ್ತು ವರ್ಷಗಳ ಹಿಂದೆ ತೆರೆಕಂಡಿದ್ದ ಕಂಬಕ್¤ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ಕರೀನಾ ಮತ್ತು ಅಕ್ಷಯ್ ಕುಮಾರ್ ಜೋಡಿ ಈಗ ಮತ್ತೆ ಗುಡ್ ನ್ಯೂಸ್ ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಕಳೆದ ಜನವರಿ 20ರಿಂದ ಚಿತ್ರದ ಶೂಟಿಂಗ್ ಆರಂಭವಾಗಿದ್ದು, ಎರಡು ಜನರೇಷನ್ ಪ್ರೇಮಿಗಳ ನಡುವಿನ ಲವ್ ಕಂ ಸೆಂಟಿಮೆಂಟ್ ಕಥಾಹಂದರವಿರುವ ಈ ಚಿತ್ರಕ್ಕೆ ರಾಜ್ ಮೆಹ್ತಾ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಈ ಚಿತ್ರವನ್ನು ಕರಣ್ ಜೋಹರ್ ನಿರ್ಮಿಸುತ್ತಿದ್ದು, ಮುಂಬರುವ ಸೆಪ್ಟೆಂಬರ್ ವೇಳೆಗೆ ಈ ಸಿನಿಮಾ ತೆರೆಗೆ ಬರಲಿದೆ. ಮತ್ತೂಂದೆಡೆ ರಾಜಕೀಯ ವಲಯದಲ್ಲೂ ಕರೀನಾಗೆ ಭರ್ಜರಿ ಡಿಮ್ಯಾಂಡ್ ಇದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭೂಪಾಲ್ ಲೋಕಸಭಾ ಕ್ಷೇತ್ರದಿಂದ ಕರೀನಾ ಕಪೂರ್‌ಗೆ ಟಿಕೆಟ್ ಕೊಡಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿತ್ತು ಎನ್ನಲಾಗಿದೆ. ಕರೀನಾ ಕೂಡ ರಾಜಕೀಯಕ್ಕೆ ಧುಮುಕುತ್ತಾರೆ ಎಂದು ಎಲ್ಲರೂ ಭಾವಿಸಿರುವಾಗಲೇ, ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಕರೀನಾ, “”ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಗುರಿ ಏನಿದ್ದರೂ ಸಿನಿಮಾ ರಂಗ ಮಾತ್ರ” ಎಂದು ಹಲವರಿಗೆ ಅಚ್ಚರಿ ಮೂಡಿಸಿದ್ದಾರೆ. Advertisement
ಮತ್ತೆ ಕರೀನಾ!
12:30 AM Feb 01, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.