Advertisement

Karkala; ಫ್ಲ್ಯಾಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ; ಲಕ್ಷಾಂತರ ರೂ ನಷ್ಟ

11:06 AM Jul 28, 2024 | Team Udayavani |

ಕಾರ್ಕಳ: ನಗರದ ಪುಲ್ಕೇರಿ ಬೈಪಾಸ್ ಬಳಿಯ ಬಹುಮಹಡಿ ಕಟ್ಟಡವೊಂದರ ಕೊಠಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ.

Advertisement

ವಸತಿಗೃಹದ ಹೊರಾಂಗಣದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ರಾತ್ರಿ 10.30ರ ವೇಳೆಗೆ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಗೋಡೆ, ಬಾಗಿಲು ಸಂಪೂರ್ಣ ನುಚ್ಚು ನೂರಾಗಿದೆ. ಫ್ಲ್ಯಾಟ್ ನ ಒಳಗಿರುವ ಪೀಠೋಪಕರಣಗಳು, ಬಟ್ಟೆಬರೆ, ಅಡುಗೆಮನೆ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಫ್ಲ್ಯಾಟ್ ನಲ್ಲಿದ್ದವರ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂ ಮೌಲ್ಯದ ನಷ್ಟವಾಗಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next