Advertisement

Karkala: ಬೃಹತ್ ಮರ ಉರುಳಿಬಿದ್ದು ಬೈಕ್ ಸವಾರ ಮೃತ್ಯು

01:06 PM Jul 07, 2023 | Team Udayavani |

ಕಾರ್ಕಳ : ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ.

Advertisement

ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.

ಮೃತರನ್ನು ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ.

ಹಲವು ಗಂಟೆಗಳ ಕಾಲ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವ ಕಾರ್ಯ ಮಾಡಿದರು.

ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Advertisement


 

Advertisement

Udayavani is now on Telegram. Click here to join our channel and stay updated with the latest news.

Next