Advertisement
ಬೋವಿ ಸಂಘದ ಜಿಲ್ಲಾಧ್ಯಕ್ಷ ಆನಂದ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ್ದು, ಇದರ ಹಿಂದೆ ಇನ್ನಷ್ಟು ಮಂದಿ ಇರುವ ಶಂಕೆ ಇದೆ. ಪೊಲೀಸರು ಕೆಲವರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕೃತ್ಯವನ್ನು ಖಂಡಿಸಿ ಸಂಘದ ನೇತೃತ್ವದಲ್ಲಿ ಇತರ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಆ.26ರಂದು ಬೆಳಗ್ಗೆ 9.30ಕ್ಕೆ ಕಾರ್ಕಳದಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.
Related Articles
ಮಂಗಳೂರು: ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಬಲವಂತವಾಗಿ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿರುವ ಘಟನೆ ಇಡೀ ಸಮಾಜವೇ ತಲೆತಗ್ಗಿಸುವ, ಹಿಂದೂ ಯುವತಿಯರನ್ನು ಗುರಿಯಾಗಿಟ್ಟುಕೊಂಡು ಇಂತಹ ಕೃತ್ಯ ನಡೆಸುವ ವ್ಯವಸ್ಥಿತ ತಂಡ ಕಾರ್ಯಾಚರಿಸುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ. ಕರಾವಳಿಯಲ್ಲಿ ಡ್ರಗ್ಸ್ ಜಾಲ ವ್ಯಾಪಕವಾಗಿ ಹರಡಿರುವುದಕ್ಕೆ ಇದೊಂದು ಉದಾಹರಣೆ ಎಂದು ದುರ್ಗಾವಾಹಿನಿ ಹೇಳಿದೆ.
Advertisement
ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಗಲ್ಲಿಗೇರಿಸಲು ಪೂರಕವಾಗಿ ಬಲವಾದ ಸೆಕ್ಷನ್ ಹಾಕಬೇಕು. ಅಲ್ಲದೆ ಕರಾವಳಿಯಲ್ಲಿ ಅವ್ಯಾಹತವಾಗಿ ನಡೆಯುವ ಡ್ರಗ್ಸ್ ಜಾಲವನ್ನು ಮಟ್ಟಹಾಕಲು ತಂಡ ರಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಹೆಣ್ಣು ಮಕ್ಕಳಿಗೆ ಸೂಕ್ತರಕ್ಷಣೆ ನೀಡುವುದರೊಂದಿಗೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣವನ್ನು ಉಪಯೋಗಿಸಿ ಇಂತಹ ಕೃತ್ಯ ನಡೆಸುವ ವ್ಯವಸ್ಥಿತ ತಂಡ ಇರುವ ಶಂಕೆ ಬಲವಾಗಿದ್ದು, ಹೆತ್ತವರು ತಮ್ಮ ಮಕ್ಕಳ ಬಗ್ಗೆ ನಿಗಾವಹಿಸಬೇಕು ಎಂದು ದುರ್ಗಾವಾಹಿನಿ ದ.ಕ. ಜಿಲ್ಲಾ ಸಂಯೋಜಕಿ ಶ್ವೇತಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.