Advertisement

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

01:06 AM May 09, 2024 | Team Udayavani |

ಕಾರ್ಕಳ: ಸುಡುಮದ್ದು ತಯಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಓರ್ವ ಮಹಿಳೆ ಸೇರಿ ಇಬ್ಬರು ಕಾರ್ಮಿಕರು ಗಾಯಗೊಂಡ ಘಟನೆ ಕಾರ್ಕಳ ಕಸಬಾದ ಬಂಗ್ಲಗುಡ್ಡೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ.

Advertisement

ಕಜೆಯ ಮನೆಯೊಂದರಲ್ಲಿ ಹಲವು ವರ್ಷಗಳಿಂದ ಸುಡು ಮದ್ದು ತಯಾರಿಕಾ ಘಟಕ ನಿರ್ವಹಿಸಲಾಗುತ್ತಿತ್ತು. ಬುಧವಾರ ಬೆಳಗ್ಗೆ ಎಂದಿನಂತೆ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿತು. ಸುಷ್ಮಾ ಎಂಬವರಿಗೆ ಗಂಭೀರ ಸ್ವರೂಪದ ಸುಟ್ಟ ಗಾಯವಾಗಿದ್ದು, ಇನ್ನೋರ್ವ ಕಾರ್ಮಿಕ ಶಭಿØàರ ಎಂಬವರಿಗೂ ಸುಟ್ಟ ಗಾಯವಾಗಿವೆ. ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ಘಟಕದಲ್ಲಿ 3 ಪ್ರತ್ಯೇಕ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ. ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡಕ್ಕೆ ಸಂಪೂರ್ಣ ಹಾನಿಯಾಗಿದೆ.

ಸುಡುಮದ್ದನ್ನು ಕಟ್ಟಡದ ಹೊರಗೆ ಅಜಾಗರೂಕತೆಯಿಂದ ಬಿಸಿಲಿಗೆ ಒಣಗಲು ಹಾಕಿದ್ದು, ಸುಡುಮದ್ದು, ಗನ್‌ ಪೌಡರಿಗೆ ಆಕಸ್ಮಿಕ ಬೆಂಕಿ ತಗಲಿ ಈ ಅವಘಡ ನಡೆದಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next