Advertisement
ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
Related Articles
Advertisement
ಆರಂಭದಲ್ಲಿ ಯುವತಿಗೆ ಮದ್ಯ ಹಾಗೂ ಇತರ ಮಾದಕ ಪದಾರ್ಥ ನೀಡಿ ಓರ್ವ ಅತ್ಯಾಚಾರ ಎಸಗಿದ್ದು, ಬಳಿಕ ಮತ್ತಿಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದು ಬಂದಿದೆ.
ಬಜರಂಗದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ಅವರು ಘಟನೆಯನ್ನು ಖಂಡಿಸಿದ್ದು ನಾಳೆಯೊಳಗೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದಲ್ಲಿ ಠಾಣೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೋವಿ ಸಮುದಾಯದವರು ಕೂಡ ಘಟನೆಯನ್ನು ಖಂಡಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಓರ್ವ ಆರೋಪಿ ಪರಿಚಿತ? ಆರೋಪಿಗಳ ಪೈಕಿ ಓರ್ವನು ಯುವತಿಗೆ ಪರಿಚಿತನಾಗಿದ್ದಾನೆ ಎಂದು ತಿಳಿದುಬಂದಿದೆ. ಈತನೇ ಈಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ಮತ್ತಿಬ್ಬರನ್ನು ಕರೆಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಯುವತಿಯು ಜೇನುಕೃಷಿ ಮಾಡಿಕೊಂಡಿರುತ್ತಿದ್ದಳು. ಈಕೆಯ ಕುಟುಂಬ ಕೆಲವು ವರ್ಷಗಳ ಹಿಂದೆಯೇ ಕಾರ್ಕಳಕ್ಕೆ ಬಂದು ನೆಲೆಸಿತ್ತು ಎಂದು ತಿಳಿದುಬಂದಿದೆ.