Advertisement

Karkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಇನ್ನೋರ್ವ ಆರೋಪಿ ಬಂಧನ

10:22 AM Aug 24, 2024 | Team Udayavani |

ಕಾರ್ಕಳ: ನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಓರ್ವ ಆರೋಪಿ ಅಲ್ತಾಫ್ ನನ್ನು ಈಗಾಗಲೇ ಬಂಧಿಸಲಾಗಿದ್ದು, ಇನ್ನೋರ್ವ ಆರೋಪಿ ಸವೇರಾ ರಿಚರ್ಡ್‌ ಕಾರ್ಡೋಜಾ ಎಂಬಾತನನ್ನು ಬಂಧಿಸಿರುವುದಾಗಿ ಎಸ್‌.ಪಿ. ಅರುಣ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಯುವತಿಗೆ ಅಮಲು ಪದಾರ್ಥ ನೀಡಿ ಅಲ್ತಾಫ್ ಎಂಬಾತ ಅತ್ಯಾಚಾರ ನಡೆಸಿದ್ದು, ಅಮಲು ಪದಾರ್ಥ ಹಾಗೂ ಮದ್ಯ ತಂದುಕೊಟ್ಟ ಇನ್ನೋರ್ವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಕುಕ್ಕುಂದೂರು ಗ್ರಾಮದ 21 ರ ವಯಸ್ಸಿನ ಯುವತಿ ಮೇಲೆ ನಾಲ್ಕು ಮಂದಿ ಅನ್ಯಕೋಮಿನ ಯುವಕರು ಅಮಲು ಪದಾರ್ಥ ನೀಡಿ ಅತ್ಯಾಚಾರ ನಡೆಸಿದ್ದಾರೆ.  ಪ್ರಜ್ಞಾಹೀನ  ಸ್ಥಿತಿಯಲ್ಲಿರುವ ಯುವತಿಯನ್ನು ಕಾರ್ಳಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂತ್ರಸ್ಥೆಗೆ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ಆರೋಪಿ ಬಂಧನಕ್ಕೆ ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next