Advertisement
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಮಾರುಕಟ್ಟೆಯ ಪ್ರಾಂಗಣದಲ್ಲಿ ವಿವಿಧ ರೀತಿಯ ಗಿಡಗಳನ್ನು ನೆಟ್ಟು ಬಳಿಕ ನಡೆದ ಸಭಾ ಕಾರ್ಯಕ್ರಮ ವನ್ನುದ್ದೇಶಿಸಿ ಮಾತನಾಡಿ, ತಾಲೂಕಿನಲ್ಲಿ ಪರಿಸರ ಉತ್ಸವ, ಇಂಗುಗುಂಡಿಗಳ ನಿರ್ಮಾಣ ಸೇರಿದಂತೆ ವಿವಿಧ ರೀತಿಯಲ್ಲಿ ಪರಿಸರಕ್ಕೆ ಪೂರಕವಾಗುವ ಕೆಲಸಗಳನ್ನು ಮಾಡಲಾಗಿದೆ. ಈ ವರ್ಷ ತಾಲೂಕಿನ ಕೆರೆಗಳ ಅಭಿವೃದ್ಧಿಗೆ ವಿಶೇಷವಾದ ಮಹತ್ವ ನೀಡಲಾಗಿದ್ದು, ಮುಂದಿನ ವರ್ಷ ಮತ್ತಷ್ಟು ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು.ಅಂತರ್ಜಲ ಕುರಿತಾಗಿ ತಾಲೂಕಿನಲ್ಲಿಯೂ ಕೆಲವೊಂದು ಆತಂಕಗಳಿವೆ. ಆ ಆತಂಕಗಳನ್ನು ಪರಿ ಹರಿಸುವ ನಿಟ್ಟಿನಲ್ಲಿ ಅಂತರ್ಜಲ ಮರುಪೂರಣ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದರು.
Related Articles
Advertisement
ತಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ಆರ್.ಕೆ. ಭಟ್ ಮಾತನಾಡಿದರು. ಜಿ.ಪಂ. ಸದಸ್ಯರಾದ ರೇಶ್ಮಾ, ದಿವ್ಯಾ ಗಿರೀಶ್, ಪುರಸಭಾ ಅಧ್ಯಕ್ಷೆ ಅನಿತಾ ಅಂಚನ್,ಉಪಾಧ್ಯಕ್ಷ ಗಿರಿಧರ್ ನಾಯಕ್, ತಾ.ಪಂ. ಉಪಾಧ್ಯಕ್ಷ ಗೋಪಾ ಮೂಲ್ಯ, ಎಂಪಿಎಂಸಿ ಸದಸ್ಯರಾದ ದಿನೇಶ್ ಪೈ, ಮೊದಲಾದವರು ಉಪಸ್ಥಿತರಿದ್ದರು.ಎಂಪಿಎಂಸಿ ಉಪಾಧ್ಯಕ್ಷ ಸಂಜೀವ ನಾಯ್ಕ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಧರ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಜಯವರ್ಮ ಜೈನ್ ವಂದಿಸಿದರು.