ಕಾರ್ಕಳ: ಕಸಬಾ ಗ್ರಾಮದ ತೆಳ್ಳಾರು ರಸ್ತೆ ನಿವಾಸಿ ಪ್ರೀತಿಕಾ (34) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.19ರಂದು ನಡೆದಿದೆ.
ಸುಮಾರು 7 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಬೆಂಗಳೂರು, ಉಡುಪಿ ಮೊದಲಾದೆಡೆ ಖಾಸಗಿ ಆಸ್ಪತ್ರೆ, ಕಾರ್ಕಳ ಸರಕಾರಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖವಾಗದೇ ಇದ್ದು, ಮನೆಯಲ್ಲಿ ತೊಂದರೆ ನೀಡುತ್ತಿದ್ದ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಲು ಇರುವುದರಿಂದ ಡಿ.14ರಿಂದ ನಗರದ ಆಶ್ರಮಕ್ಕೆ ಸೇರಿಸಲಾಗಿತ್ತು.
ಮಾನಸಿಕ ಕಾಯಿಲೆ ಹೆಚ್ಚಾಗಿರುವುದರಿಂದ ಮನನೊಂದ ಆಕೆ ಜ. 19ರಂದು ಚೂಡಿದಾರ್ ಶಾಲಿನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ, ಜಡಿಗೇನಹಳ್ಳಿ ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ